ಹುಬ್ಬಳ್ಳಿ,ಸೆಪ್ಟಂಬರ್,13,2023(www.justkannada.in): ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ್ ಪ್ರತಿಷ್ಠಾಪನೆಗೆ ನಿರ್ಧರಿಸಿದ್ದೇವೆ. ಆದರೆ ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಸರ್ಕಾರ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಿಲ್ಲ ಎಂದು ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಕಿಡಿಕಾರಿದರು.
ಈ ಕುರಿತು ಇಂದು ಮಾತನಾಡಿದ ಶಾಸಕ ಅರವಿಂದ ಬೆಲ್ಲದ್, ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಕೂರಿಸಲು ಕಳೆದ ಬಾರಿ ‘ಸುಪ್ರೀಂ ಕೋರ್ಟ್ ಅವಕಾಶ ನೀಡಿದೆ. ಪಾಲಿಕೆ ಸಾಮಾನ್ಯ ಸಭೆಯಲ್ಲಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ. ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಅವಕಾಶ ಕೊಡುತ್ತಿಲ್ಲ. ಸಿದ್ದರಾಮಯ್ಯ ಸರ್ಕಾರ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕೊಡುತ್ತಿಲ್ಲ. ಸಿದ್ದರಾಮಯ್ಯನವರು ಜಗತ್ತಿಗೆ ಬೇಡವಾದ ಟಿಪ್ಪು ಜಯಂತಿ ಮಾಡಿದ್ದಾರೆ. ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮನವಿ ಮಾಡಿದರೇ ಅವಕಾಶ ಕೊಡುತ್ತಿಲ್ಲ ಎಂದು ಆರೋಪಿಸಿದರು.
ನಾವು ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತೇವೆ. ಒಂದು ತಿಂಗಳ ಹಿಂದೆಯೇ ಸರ್ಕಾರಕ್ಕೆ ಜಿಲ್ಲಾಧಿಕಾರಿ ಪತ್ರ ಬರೆದಿದ್ದಾರೆ. ಆದರೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಈದ್ಗಾ ಮೈದಾನ ಪಾಲಿಕೆ ಜಾಗ, ಇದರಲ್ಲಿ ಸರ್ಕಾರದ ಹಸ್ತಕ್ಷೇಪ ಬರಲ್ಲ ಎಂದು ಶಾಸಕ ಅರವಿಂದ ಬೆಲ್ಲದ್ ಹೇಳಿದರು.
Key words: Govt – Ganesha – Idga Maidan-MLA- Arvind Bellad