ಬೆಂಗಳೂರು, ಸೆಪ್ಟೆಂಬರ್ 13, 2023 (www.justkannada.in): ಜವಾನ್ ಚಿತ್ರ ಬಿಡುಗಡೆಯಾಗಿ ಎರಡೇ ದಿನಕ್ಕೆ ವಿಶ್ವದಾದ್ಯಂತ 240.47 ಕೋಟಿ ರೂಪಾಯಿ ಗಳಿಸಿದೆ. ಈ ಮೂಲಕ ಬಾಕ್ಸ್ ಆಫೀಸ್ ಕಿಂಗ್ ಆಗಿ ಶಾರುಖ್ ಮತ್ತೊಮ್ಮೆ ಮೋಡಿ ಮಾಡಿದ್ದಾರೆ.
ತಮಿಳಿನ ಖ್ಯಾತ ನಿರ್ದೇಶಕ ಅಟ್ಲೀ ನಿರ್ದೇಶನದ ಪ್ಯಾನ್-ಇಂಡಿಯಾ ಚಿತ್ರ ಜವಾನ್ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗಿ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಶಾರುಖ್ ಅಭಿಮಾನಿಗಳು ವಿಶೇಷ ಪಾತ್ರದಲ್ಲಿ ನೆಚ್ಚಿನ ನಟನನ್ನು ನೋಡಿ ಫುಲ್ ಖುಷಿಯಾಗಿದ್ದಾರೆ.
ಕೇವಲ ಮೊದಲ 2 ದಿನಗಳಲ್ಲಿ ಜವಾನ್ ಚಿತ್ರ ರೂ 240. 47 ಕೋಟಿ ವಿಶ್ವದಾದ್ಯಂತ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿದೆ ಎಂದು ಪ್ರೊಡಕ್ಷನ್ ಹೌಸ್ ರೆಡ್ ಚಿಲ್ಲೆಸ್ ಎಂಟರ್ಟೈನ್ಮೆಂಟ್ ಹೇಳಿಕೊಂಡಿದೆ.
ಅಂದಹಾಗೆ ಚಿತ್ರದಲ್ಲಿ ನಯನತಾರಾ ಮತ್ತು ವಿಜಯ್ ಸೇತುಪತಿ ಹಾಗೂ ದೀಪಿಕಾ ಪಡುಕೋಣೆ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರವು ಮೊದಲ ದಿನದಲ್ಲಿ ವಿಶ್ವಾದ್ಯಂತ ರೂ 129.6 ಕೋಟಿ ಸಂಗ್ರಹಿಸಿತ್ತು. ಇದು ಜಾಗತಿಕವಾಗಿ ಹಿಂದಿ ಚಿತ್ರರಂಗದ ಇತಿಹಾಸದಲ್ಲಿ ಅತಿದೊಡ್ಡ ಕಲೆಕ್ಷನ್.