ಬೆಂಗಳೂರು, ಸೆಪ್ಟೆಂಬರ್ 18, 2023 (www.justkannada.in): ದೇಶದ ಅಭಿವೃದ್ಧಿಯಲ್ಲಿ ಯಾವುದೇ ಅಡೆತಡೆಗಳಿಲ್ಲ. ಭಾರತವು ತನ್ನ ಎಲ್ಲಾ ಕನಸುಗಳು ಮತ್ತು ನಿರ್ಣಯಗಳನ್ನು ಯಾವುದೇ ಅಡೆತಡೆಗಳಿಲ್ಲದೆ ಈಡೇರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ವಿಶೇಷ ಅಧಿವೇಶನಕ್ಕೂ ಮುನ್ನ ಮಾತನಾಡಿದ ಅವರು, ಸಂಸತ್ತಿನ ಈ ಅಧಿವೇಶನವು ಚಿಕ್ಕದಾಗಿರಬಹುದು, ಆದರೆ ಇದು ವ್ಯಾಪ್ತಿಯಲ್ಲಿ ಐತಿಹಾಸಿಕವಾಗಿದೆ. ನಾಳೆ ಗಣೇಶ ಚತುರ್ಥಿಯಂದು ನಾವು ಹೊಸ ಸಂಸತ್ತು ಕಟ್ಟಡಕ್ಕೆ ಪ್ರವೇಶಿಸುತ್ತಿದ್ದೇವೆ. ಗಣೇಶನಿಗೆ ‘ವಿಘ್ನಹರ್ತಾ’ ಎಂಬ ಹೆಸರಿದೆ, ಅದರಂತೆ ದೇಶದ ಅಭಿವೃದ್ಧಿಯಲ್ಲಿ ಯಾವುದೇ ಅಡೆತಡೆಗಳಿಲ್ಲ ಎಂದು ಪ್ರಧಾನಿ ತಿಳಿಸಿದ್ದಾರೆ.
ಈಗ ಹೊಸ ಜಾಗದಿಂದ ಪಯಣವನ್ನು ಮುಂದಕ್ಕೆ ಕೊಂಡೊಯ್ಯುತ್ತಿರುವಾಗಲೇ 2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಬೇಕಿದೆ. ಮುಂಬರುವ ಎಲ್ಲಾ ನಿರ್ಧಾರಗಳನ್ನು ಹೊಸ ಸಂಸತ್ತಿನ ಕಟ್ಟಡದಲ್ಲಿ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.
ಸಂಸತ್ತಿನ ಈ ವಿಶೇಷ ಅಧಿವೇಶನದ ಅವಧಿ ಚಿಕ್ಕದಾಗಿದ್ದರೂ ಕೂಡ ಸಮಯ ಬಹಳ ಮಹತ್ವದ್ದಾಗಿದ್ದು, ದೊಡ್ಡದಾಗಿದೆ. ಇದೊಂದು ಐತಿಹಾಸಿಕ ನಿರ್ಧಾರಗಳ ಅಧಿವೇಶನ ಎಂದು ಮೋದಿ ಹೇಳಿದ್ದಾರೆ.