ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಕರವೇ ಯತ್ನ.

ಬೆಂಗಳೂರು,ಸೆಪ್ಟಂಬರ್,21,2023(www.justkannada.in):  ಸಂಕಷ್ಟದ ಪರಿಸ್ಥಿತಿಯಲ್ಲೂ ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಕೊಟ್ಟಿರುವ ಆದೇಶವನ್ನ ಖಂಡಿಸಿ ಹಾಗೂ ತಮಿಳುನಾಡಿಗೆ ನೀರು ಹರಿಸದಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿ  ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಇಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿ ಪ್ರತಿಭಟಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಕರವೇ ಕಚೇರಿಯಿಂದ ವಿಧಾನಸೌಧದವರೆಗ ಪಾದಯಾತ್ರೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ವಿಧಾನಸೌಧದ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಪೊಲೀಸರು ಮೌರ್ಯ ಸರ್ಕಲ್ ಬಳಿ ಬ್ಯಾರಿಕೇಡ್ ಹಾಕಿ ರ್ಯಾಲಿ ತಡೆದು ಪ್ರತಿಭಟನಾಕಾರರನ್ನ ವಶಕ್ಕೆ ಪಡೆದರು.

ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದು ಬಿಎಂಟಿಸಿ ಬಸ್ ನಲ್ಲಿ ಬೇರೆಡೆಗೆ ರವಾನಿಸಿದರು.

ನಾಳೆ ಸಭೆ ಮಾಡಿ ಕರ್ನಾಟಕ ಬಂದ್ ಗೆ ಕರೆ

ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಕರವೇ ಪ್ರತಿಭಟನೆ ನಡೆಸಲಿದೆ. ಸರ್ಕಾರಿ ಕಚೇರಿ ಮುತ್ತಿಗೆಗೆ ಯತ್ನಿಸಲಾಗುತ್ತದೆ.  ನಾಳೇ ಯಾವುದೇ ಅನಾಹುತ ಆದ್ರೆ ಸರ್ಕಾರವೇ ಕಾರಣ ಎಂದು ಎಚ್ಚರಿಕೆ ನೀಡಿದ ಕರವೇ ಅಧ್ಯಕ್ಷ ನಾರಾಯಣಗೌಡ ನಾಳೇ ಸಭೆ ಮಾಡಿ ಕರ್ನಾಟಕ ಬಂದ್ ಗೆ ಕರೆ  ನೀಡಲಾಗುತ್ತದೆ ಎಂದರು.

Key words:  attempt – siege -Vidhana Soudha – water -not be -released -Tamil Nadu.