ಮಂಡ್ಯ,ಸೆಪ್ಟಂಬರ್,23,2023(www.justkannada.in): ಪಾಲಿಸಲು ಆಗದ ತೀರ್ಪನ್ನ ಪಾಲಿಸದಿದ್ದರೆ ನ್ಯಾಯಾಂಗ ನಿಂದನೆ ಆಗಲ್ಲ. ಹೀಗಾಗಿ ತಮಿಳುನಾಡಿಗೆ ನೀರು ನಿಲ್ಲಿಸಿದರೆ ನ್ಯಾಯಾಂಗ ನಿಂದನೆ ಆಗಲ್ಲ. ಸರ್ಕಾರ ಮೇಲ್ಮನವಿ ಸಲ್ಲಿಸಲಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಲಹೆ ನೀಡಿದರು.
ಈ ಕುರಿತು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಸುಪ್ರೀಂಕೋರ್ಟ್ ತೀರ್ಪಿನಂತೆ ನೀರು ಬಿಡಬೇಕು. ಇಲ್ಲದಿದ್ದರೇ ನ್ಯಾಯಾಂಗ ನಿಂದನೆ ಆಗುತ್ತೆ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಸುಪ್ರೀಂಗೆ ನೀರು ಬಿಡಲು ಆಗಲ್ಲ ಎಂದು ಮೇಲ್ಮನವಿ ಸಲ್ಲಿಸಿ. 2016 ತೀರ್ಪು ಪ್ರಸ್ತಾಪಿಸಿ ಎಂದು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದರು.
ಪಾಲಿಸಲು ಆಗದ ತೀರ್ಪನ್ನ ಪಾಲಿಸದಿದ್ದರೆ ಅದು ನ್ಯಾಯಾಂಗ ನಿಂದನೆ ಆಗಲ್ಲ. ಆಂಧ್ರದ ನೀರಾವರಿ ಪ್ರಕರಣ ಸಂಬಂಧ ನ್ಯಾಯಮೂರ್ತಿ ಉದಮ್ ಮಲ್ಲಿಕ್ ಹೇಳಿದ್ದರು. ಸೆ.22, 2016 ನ್ಯಾಯಾಲಯ ಅದನ್ನ ಎತ್ತಿಹಿಡಿದಿತ್ತು. ಅದೇ ರೀತಿ ರಾಜ್ಯ ಸರ್ಕಾರ ನೀರು ಬಿಡಲು ಆಗಲ್ಲ ಎಂದು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಿ ಎಂದು ಹೆಚ್.ಡಿಕೆ ತಿಳಿಸಿದರು.
Key words: Stopping -water -supply – Tamil Nadu – not contempt of court- Former CM- HDK