ಮೈಸೂರು, ಅಕ್ಟೋಬರ್,7,2023(www.justkannada.in): ಸರ್ಕಾರ ಲಿಂಗಾಯತ ಅಧಿಕಾರಿಗಳ ಕಡೆಗಣನೆ ಮಾಡುತ್ತಿದೆ ಎಂಬ ಶಾಮನೂರು ಶಿವಶಂಕರಪ್ಪ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಸಿಎಂ ಸಿದ್ಧರಾಮಯ್ಯ ಯಾವ ಸಮುದಾಯಕ್ಕೂ ಅನ್ಯಾಯ ಮಾಡಿಲ್ಲ ಎಂದಿದ್ದಾರೆ.
ಇಂದು ಮೈಸೂರಿನಲ್ಲಿ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ನಮ್ಮ ಸರ್ಕಾರದಲ್ಲಿ ಯಾವ ಸಮುದಾಯದ ಕಡೆಗಣನೆಯೂ ಆಗಿಲ್ಲ, ಸಮುದಾಯವನ್ನು ಕಡೆಗಣಿಸುವುದಕ್ಕೆ ಸಿಎಂ ಅವಕಾಶ ಕೊಡಲ್ಲ. ಎಲ್ಲಾ ಯೋಜನೆಗಳು ಜಾತಿರಹಿತ ಸಮಾಜ ನಿರ್ಮಾಣಕ್ಕೆ ಪೂರಕವಾಗಿವೆ ಎಂದು ನುಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಸವಣ್ಣನ ತತ್ವದ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರವನ್ನು ಕಡ್ಡಾಯಗೊಳಿಸಿದ್ದಾರೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.
Key words: CM Siddaramaiah – not – injustice – any community – Minister- Ishwar Khandre.