ಬೆಂಗಳೂರು,ಅಕ್ಟೋಬರ್ 12,2023(www.justkannada.in): ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಕಡೆಗಳಲ್ಲಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ತೆರಿಗೆ ವಂಚನೆ ಆರೋಪದ ಮೇಲೆ ಇಂದು ಬೆಳ್ಳಂಬೆಳಗ್ಗೆ ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳ ದಾಳಿ ಮಾಡಿದ್ದಾರೆ. ಮಲ್ಲೇಶ್ವರಂ, ಸದಾಶಿವನಗರ, ಡಾಲರ್ಸ್ ಕಾಲೋನಿ, ಮತ್ತಿಕೆರೆ, ಸರ್ಜಾಪುರ ರಸ್ತೆ, ಬಿಇಎಲ್ ವೃತ್ತ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಚಿನ್ನದ ವ್ಯಾಪಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು ದಾಖಲೆ ಪತ್ರವನ್ನು ಪರಿಶೀಲನೆ ನಡೆಸಿದ್ದಾರೆ.
ಕಾಫಿ ಬೋರ್ಡ್ ನಿರ್ದೇಶಕ ಚಂದ್ರಶೇಖರ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಕ್ಟೋಬರ್ 06ರಂದು ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. 15ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡಗಳು ಬೆಂಗಳೂರಿನ ಹಲವೆಡೆ ಖಾಸಗಿ ಕಂಪನಿಗಳು, ಅದರ ಮಾಲೀಕರು ಹಾಗೂ ಚಿನ್ನದ ವ್ಯಾಪಾರಿಗಳ ಮನೆಗಳ ಮೇಲೆ ದಾಳಿ ಮಾಡಿತ್ತು.
Key words: IT raids – Bangalore-document- verification.