ಬೆಂಗಳೂರು, ಅಕ್ಟೋಬರ್, 20,2023(www.justkannada.in): ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಇಂದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪೂರ್ಣಿಮಾ ಶ್ರೀನಿವಾಸ್ ಅವರು ಅಧಿಕೃತವಾಗಿ ಬಿಜೆಪಿಗೆ ಗುಡ್ಬೈ ಹೇಳಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗುತ್ತಿದೆ. ಕಳೆದ ತಿಂಗಳಷ್ಟೇ ಕೆ.ಆರ್. ಪುರದಲ್ಲಿರುವ ಪೂರ್ಣಿಮಾ ಶ್ರೀನಿವಾಸ್ ನಿವಾಸಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ಪಕ್ಷ ಸೇರುವುದಾಗಿ ಡಿಕೆಶಿಗೆ ಪೂರ್ಣಿಮಾ ಭರವಸೆ ಕೊಟ್ಟಿದ್ದರು. ಅದರಂತೆ ಇದೀಗ ಕಾಂಗ್ರೆಸ್ ಸೇರುತ್ತಿದ್ದಾರೆ.
2018ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದ ಕೆ ಪೂರ್ಣಿಮಾ ಶ್ರೀನಿವಾಸ್ 2023ರ ಚುನಾವಣೆಯಲ್ಲಿ ಸೋಲು ಕಂಡರು. ಸೋತ ಮೂರ್ನಾಲ್ಕು ತಿಂಗಳಲ್ಲೇ ಇದೀಗ ಕಾಂಗ್ರೆಸ್ನತ್ತ ಮುಖಮಾಡಿದ್ದಾರೆ.
Key words: Former BJP-MLA -Purnima Srinivas –will- join- Congress -today