ಬಾಗಲಕೋಟೆ,ಅಕ್ಟೋಬರ್,21,2023(www.justkannada.in): ಮುಂಬರುವ ಲೋಕಸಭಾ ಚುನಾವಣೆಗೂ ಮೊದಲೇ ರಾಜ್ಯದಲ್ಲಿ ಸಾಕಷ್ಟು ಬದಲಾವಣೆ ಆಗುತ್ತೆ. ಆಪರೇಷನ್ ಹಸ್ತ ಆಗಲ್ಲ, ಆಪರೇಷನ್ ಕಮಲ ಆಗುತ್ತದೆ ಕಾದುನೋಡಿ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ನುಡಿದಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಮುರುಗೇಶ್ ನಿರಾಣಿ, ಈ ಸರ್ಕಾರ ಬಂದಮೇಲೆ ಯಾವುದೇ ಅಭಿವೃದ್ಧಿ ಕಾರ್ಯ ನಡೀತಿಲ್ಲ. ಬಿಟ್ಟಿ ಭಾಗ್ಯದಿಂದ ಈ ವರ್ಷ 25,000 ಕೋಟಿ ರೂ. ಖರ್ಚು ಮಾಡಲ್ಲ. ಇದರಿಂದ ಕಾಂಗ್ರೆಸ್ ಸರ್ಕಾರದ ಬಗ್ಗೆ ಜನರು ಬಹಳ ಬೇಸತ್ತಿದ್ದಾರೆ. ಶಾಲಾ ಮಕ್ಕಳು, ಕೆಲಸಕ್ಕೆ ಹೋಗುವವರಿಗೆ ಬಸ್ ನಲ್ಲಿ ಸೀಟ್ ಸಿಗುತ್ತಿಲ್ಲ. ಮನೆ, ಸಣ್ಣ ಕೈಗಾರಿಕೆಗಳಿಗೆ ಕನಿಷ್ಠ 60% ಹೆಚ್ಚುವರಿ ಬಿಲ್ ಬರುತ್ತಿದೆ. ಕರ್ನಾಟಕದಲ್ಲಿ ಈಗ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಆಗುತ್ತಿಲ್ಲ ಎಂದು ಕಿಡಿಕಾರಿದರು.
ಡಿಸಿಎಂ ಡಿಕೆ ಶಿವಕುಮಾರ್ ಮೇಲೆ ಸಿಬಿಐ ತೂಗುಗತ್ತಿ ವಿಚಾರ ಕುರಿತು ಮಾತನಾಡಿದ ಮುರುಗೇಶ್ ನಿರಾಣಿ, ಅವರು ತಪ್ಪು ಮಾಡಿರದೇ ಇದ್ದರೆ ಅವರಿಗೇನು ಆಗಲ್ಲ. ತಪ್ಪಿತಸ್ಥರಾಗಿದ್ದರೆ ಅವರಿಗೆ ಶಿಕ್ಷೆ ಆಗುತ್ತದೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದರು.
Key words: Operation Hasta – not -Operation Kamal – Former Minister- Murugesh Nirani.