ಮೈಸೂರು,ಸೆ,4,2019(www.justkannada.in): ವಿಶ್ವವಿಖ್ಯಾತ ದಸರಾ ಮಹೋತ್ಸವ ಹಿನ್ನಲೆ ಅಧಿಕಾರ ಕಿತ್ತುಕೊಂಡವರ ಜತೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಹೇಳಿಕೆ ನೀಡಿದ್ದ ಮಾಜಿ ಸಚಿವ ಸಾ.ರಾ ಮಹೇಶ್ ಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ನಾಜೂಕಾಗಿಯೇ ತಿರುಗೇಟು ನೀಡಿದ್ದಾರೆ.
ಸಾ.ರಾ.ಮಹೇಶ್ ಅವರು ಜ್ಞಾನಿಗಳು. ನನಗಿಂತಲೂ ಅಪಾರ ಜ್ಞಾನ ಹೊಂದಿದ್ದಾರೆ. ಅವರ ಬಗ್ಗೆ ನಾನು ಏನೂ ಹೇಳುವುದಿಲ್ಲ. ಅವರಿಗೆ ಒಳ್ಳೆಯದಾಗಲಿ ಎಂದು ಜೆಡಿಎಸ್ ಮುಖಂಡ ಸಾ.ರಾ ಮಹೇಶ್ ಗೆ ಸಚಿವ ವಿ,ಸೋಮಣ್ಣ ಟಾಂಗ್ ನೀಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿ ಜಾರಿ ನಿರ್ದೇಶನಾಲಯದಿಂದ ಡಿಕೆಶಿ ಬಂಧನ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ವಿ.ಸೋಮಣ್ಣ, ಬಿಜೆಪಿ ಶಿಸ್ತಿನ ಪಕ್ಷ. ಯಾವತ್ತೂ ಬಿಜೆಪಿ ಸೇಡಿನ ರಾಜಕಾರಣ ಮಾಡಿಲ್ಲ. ಯಾಕಾಗಿ ಕಾಂಗ್ರೆಸ್ನವರು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೋ ಗೊತ್ತಿಲ್ಲ. ಡಿಕೆ ಶಿವಕುಮಾರ್ ಹೊರಗೆ ಬರಲಿ ಅಂತಾ ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದರು.
ಹಾಗೆಯೇ ಡಿಕೆ ಶಿವಕುಮಾರ್ ನನಗೆ ಒಳ್ಳೆಯ ಸ್ನೇಹಿತರು. ಪಕ್ಕದ ಗ್ರಾಮದವರು. ಅವರ ಬಗ್ಗೆ ನನಗೆ ಗೌರವ ಇದೆ. ಕಾಂಗ್ರೆಸ್ನವರ ಆರೋಪಗಳ ಬಗ್ಗೆ ನಾನು ಮಾತನಾಡಲ್ಲ ಎಂದು ಸಚಿವ ಸೋಮಣ್ಣ ತಿಳಿಸಿದರು.
ಜೀರೋ ಟ್ರಾಫಿಕ್ ತ್ಯಜಿಸಿದ ಸಚಿವ ವಿ,ಸೋಮಣ್ಣ…
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಜೀರೋ ಟ್ರಾಫಿಕ್ ಗೆ ಗುಡ್ ಬೈ ಹೇಳಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ. ಸೋಮಣ್ಣ, ನಾನು ಇಲ್ಲಿತನಕ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾಗಿರುತ್ತೀನೋ ಅಲ್ಲಿವರೆಗೂ ಜೀರೋ ಟ್ರಾಫಿಕ್ ನಂಗೆ ಬೇಡ ಎಂದು ತೀರ್ಮಾನಿಸಿದ್ದೇನೆ. ನಗರದಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಬಾರದು, ಜನಸಾಮಾನ್ಯರಂತೆ ನಾನು ಓಡಾಡುತ್ತೇನೆ ಎಂದರು.
Key words: mysore-Minister –v.Somanna- tong-sa.ra Mahesh-zero traffic-cancel