ಬೆಳಗಾವಿ,ಸೆ,4,2019(www.justkannada.in): ಧಾರಾಕಾರ ಮಳೆಯಿಂದಾಗಿ ಪ್ರವಾಹ ಸೃಷ್ಟಿಯಾಗಿ ಮನೆ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಅನುಭವಿಸಿದ್ದ ಕೃಷ್ಣಾ ನದಿ ಭಾಗದ ಜನರು ಇದೀಗ ಮತ್ತೆ ಪ್ರವಾಹಕ್ಕೆ ಸಿಲುಕುವ ಭೀತಿ ಎದುರಾಗಿದೆ.
ಹೌದು, ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ, ಕೊಯ್ನಾ ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ ನೀರನ್ನ ಬಿಡುಗಡೆ ಮಾಡಲಾಗಿದ್ದು ಇದರಿಂದಾಗಿ ಕೃಷ್ಣಾ ನದಿ ಭಾಗದಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಹೀಗಾಗಿ ಕೃಷ್ಣಾ ನದಿ ಭಾಗದ ಜನರಿಗೆ ಇದೀಗ ಮತ್ತೆ ಪ್ರವಾಹದ ಭೀತಿ ಎದುರಾಗಿದೆ.
ಇನ್ನು ಕೊಡಗು ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದ್ದು . ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತವಾಗಿದೆ. ಮಳೆಯಿಂದಾಗಿ ತಲಕಾವೇರಿ ಸಂಪರ್ಕ ಕಡಿತವಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಹಾಗೆಯೇ ಹಾರಂಗಿ ಜಲಾಶಯದಿಂದ 15 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಕುಶಾಲನಗರ ಸುತ್ತಲಿನ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
Key words: 1 lakh –cusec- water- release – Koina dam-Flood- again – Krishna River.