ಬೆಂಗಳೂರು,ನವೆಂಬರ್,6,2023(www.justkannada.in): ರಾಜ್ಯದಲ್ಲಿ ಮಳೆ ಅಭಾವದಿಂದ ವಿದ್ಯುತ್ ಸಮಸ್ಯೆ ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ಇಂಧನ ಇಲಾಖೆ ಜೊತೆ ಸಿಎಂ ಸಿದ್ದರಾಮಯ್ಯ ಪರಿಶೀಲನಾ ಸಭೆ ನಡೆಸುತ್ತಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಧನ ಇಲಾಖೆಯ ಪರಿಶೀಲನೆ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಇಂಧನ ಸಚಿವ ಕೆ.ಜೆ ಚಾರ್ಜ್ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದಾರೆ.
ಮಳೆ ಅಭಾವದಿಂದ ರಾಜ್ಯದಲ್ಲಿ ಉಂಟಾಗಿರುವ ವಿದ್ಯುತ್ ಸಮಸ್ಯೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ. ವಿದ್ಯುತ್ ಕೊರತೆ ನೀಗಿಸಲು ಬೇರೆ ರಾಜ್ಯಗಳಿಂದ ಕಲ್ಲಿದ್ದಲು ಖರೀದಿ ಬಗ್ಗೆ ಇಂಧನ ಇಲಾಖೆ ಚಿಂತಿಸಿದ್ದು, ಲೋಡ್ ಶೆಡ್ಡಿಂಗ್ ಆಗಿರುವ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗುತ್ತಿದೆ.
Key words: CM Siddaramaiah-meeting – Energy Department.