ಬೆಂಗಳೂರು,ನವೆಂಬರ್,6,2023(www.justkannada.in): ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಕೇಸ್ ನಲ್ಲಿ ತಮ್ಮ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಮುನಿರತ್ನ, ನನ್ನನ್ನ ತಿಹಾರ್ ಜೈಲಿಗೆ ಕಳಿಸಬೇಕೆಂದು ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿರುವ ಶಾಸಕ ಮುನಿರತ್ನ, ನನ್ನನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಲೋಕಸಭೆ ಚುನಾವಣೆ ಮುಗಿಯುವ ತನಕ ಹೊರಗೆ ಇರಬಾರದು ಎಂದು ನನ್ನನ್ನು ತಿಹಾರ್ ಜೈಲಿಗೆ ಕಳಿಸಬೇಕೆಂದು ಪ್ರಯತ್ನ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮನೆ ಮುಂದೆ ನಡೆಯುವ ಅಪಘಾತವನ್ನೂ ನನ್ನ ತಲೆಗೆ ಕಟ್ಟುವ ಕೆಲಸ ಆಗುತ್ತಿದೆ. ಈಗ ಪ್ರತಿಮಾ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದೆ. ಈ ಹಂತದಲ್ಲಿ ನಾನು ಮಾತನಾಡುವುದು ಸರಿಯಲ್ಲ, ಸೂಕ್ತವೂ ಅಲ್ಲ. ತನಿಖೆ ಮುಗಿದ ಮೇಲೆ ನಾನೇ ಮಾತನಾಡುತ್ತೇನೆ. ರಾಜಕೀಯವಾಗಿ ಮುಗಿಸಬೇಕು ಎನ್ನುವರಿಗೆ ತನಿಖೆ ಬಳಿಕ ಉತ್ತರಿಸುವೆ ಎಂದು ಶಾಸಕ ಮುನಿರತ್ನ ಹೇಳಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಗಣಿ-ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಕೊಲೆ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುನಿರತ್ನರನ್ನು ವಿಚಾರಣೆ ನಡೆಸುವಂತೆ ಕೆಪಿಸಿಸಿ ಕಾನೂನು ಘಟಕದ ಮುಖಂಡ ಸೂರ್ಯ ಮುಕುಂದರಾಜ್ ಹೇಳಿದದ್ದರು.
Key words: trying –send- me – Tihar Jail – MLA- Munirathna.