ಬೆಂಗಳೂರು,ನವೆಂಬರ್,9,2023(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಭಾರಿ ಮಳಗೆ ಜನರು ತತ್ತರಿಸಿದ್ದು, ಈ ಮಧ್ಯೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಬೆಂಗಳೂರು ನಗರ ಪ್ರದಕ್ಷಿಣೆ ಹಾಕಿ ಸ್ಥಗಿತಗೊಂಡ ಕಾಮಗಾರಿಗಳ ವೀಕ್ಷಣೆ ಮಾಡಿದರು.
ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಹೊಸಕೆರೆಹಳ್ಳಿ ಭಾಗದಲ್ಲಿ ಸ್ಥಗಿತಗೊಂಡ ಕಾಮಗಾರಿಗಳ ವೀಕ್ಷಣೆ ಮಾಡಿದ್ದಾರೆ. ಮಾಜಿ ಸಿಎಂ ಬಿಎಸ್ ವೈಗೆ ಶಾಸಕರಾದ ಅಶ್ವತ್ಥ್ ನಾರಾಯಣ್, ಮುನಿರತ್ನ ಸಾಥ್ ನೀಡಿದರು. ಬಿಜೆಪಿ ಅವಧಿಯಲ್ಲಿನ ಅನುದಾನದಿಂದ ಆರಂಭಗೊಂಡಿದ್ದ ಕಾಮಗಾರಿಗಳನ್ನ ಬಿಎಸ್ ವೈ ವೀಕ್ಷಿಸಿದರು.
ಇನ್ನುಈ ತಿಂಗಳ ಅಂತ್ಯದಲ್ಲಿ ಮೂರು ದಿನ ಸತ್ಯಾಗ್ರಹ ಮಾಡುತ್ತೇನೆ. ವಿಧಾನಸೌಧ ಅಥವಾ ಫ್ರೀಡಂಪಾರ್ಕ್ ನಲ್ಲಿ ಸತ್ಯಾಗ್ರಹ ಮಾಡ್ತೇನೆ. ನಾಳೆ ಸತ್ಯಾಗ್ರಹದ ದಿನಾಂಕ ನಿಗದಿ ಮಾಡುತ್ತೇನೆ ಎಂದು ಬಮಾಜಿ ಸಿಎಂ ಬಿ.ಎಸ್ಯಡಿಯೂರಪ್ಪ ತಿಳಿಸಿದ್ದಾರೆ.
Key words: Bangalore Rounds -Former CM -BS Yeddyurappa