ದಾವಣಗೆರೆ,ಸೆ,7,2019(www.justkannada.in0: 17 ಅನರ್ಹ ಶಾಸಕರ ತ್ಯಾಗ ಬಲಿದಾನಗಳಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.
ಹೊನ್ನಾಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಶಾಸಕ ರೇಣುಕಾಚಾರ್ಯ, ಈ ಹಿಂದೆ ದೇಶಕ್ಕೆ ಸ್ವಾತಂತ್ರ್ಯ ಬಂದ ರೀತಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. 17 ಮಂದಿ ಅನರ್ಹ ಶಾಸಕರ ತ್ಯಾಗ ಬಲಿದಾನದಿಂದ ನಮ್ಮ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಈ ಮೂಲಕ ಶಾಸಕ ರೇಣುಕಾಚಾರ್ಯ 17 ಶಾಸಕರನ್ನ ಸ್ವಾತಂತ್ರ ಹೋರಾಟಕ್ಕೆ ಹೋಲಿಸಿದ್ದಾರೆ.
Key words: BJP government – power – 17 disqualified MLAs-Sacrifice – MP Renukacharya.