ಬೆಂಗಳೂರು,ಸೆ,11,2019(www.justkannada.in): ಸಂಚಾರ ದುಬಾರಿ ದಂಡವನ್ನ ಕಡಿತ ಮಾಡುವ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ. ಇನ್ನು ಇಂದು ನಡೆದ ಪ್ರತಿಭಟನೆ ಶಾಂತಿಯುತವಾಗಿ ನಡೆದಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿ ಈ ಬಗ್ಗೆ ಇಂದು ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಚಾರ ನಿಯಮ ಉಲ್ಲಂಘಿಸಿದರೇ ದುಬಾರಿ ದಂಡ ವಿಧಿಸುವುದರಿಂದ ತೊಂದರೆಯಾಗುತ್ತದೆ. ಈ ದಂಡ ಕಡಿತದ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಚಿಂತನೆ ನಡೆಸಲಿದ್ದಾರೆ. ಈ ಬಗ್ಗೆ ಅವರೇ ಸ್ಪಷ್ಟನೆ ನೀಡಲಿದ್ದಾರೆ ಎಂದು ತಿಳಿಸಿದರು.
ಇಂದು ನಡೆದ ಒಕ್ಕಲಿಗ ಸಮುದಾಯದ ಪ್ರತಿಭಟನಾ ರ್ಯಾಲಿ ಶಾಂತಿಯುತವಾಗಿ ನಡೆದಿದೆ. ಪ್ರತಿಭಟನಾ ರ್ಯಾಲಿ ವೇಳೆ ಎಲ್ಲೂ ಅಹಿತಕರ ಘಟನೆ ನಡೆದಿಲ್ಲ. ಪ್ರತಿಭಟನೆಗೆ ಕರೆ ಕೊಟ್ಟಿರುವವವರು ಶಾಂತಿಯುತವಾಗಿ ನಡೆಸಿದ್ದಾರೆ. ಯಾವುದೇ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿಯಾಗದಂತೆ ಶಾಂತಿಯುತ ಪ್ರತಿಭಟನೆ ನಡೆದಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಹಾಗೆಯೇ ಪ್ರತಿಭಟನಾ ರ್ಯಾಲಿ ವೇಳೆ ನಮ್ಮ ಪೊಲೀಸ್ ಇಲಾಖೆ ಸಹ ಉತ್ತಮವಾಗಿ ಕೆಲಸ ಮಾಡಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಿದ್ದಾರೆ. ಡಿಜಿ ಮತ್ತು ಐಜಿಪಿಯಿಂದ ಪೇದೆವರೆಗೆ ಸಮರ್ಥವಾಗಿ ಕೆಲಸ ನಿರ್ವಹಿಸಿದ್ದಾರೆ. ಅವರೆಲ್ಲರಿಗೂ ಧನ್ಯವಾದಗಳು ಎಂದರು.
Key words:CM BS Yeddyurappa- Thought- Traffic violation-fine- Home Minister- Basavaraja Bommai.