ಬೆಂಗಳೂರು, ಫೆಬ್ರವರಿ,28,2024(www.justkannada.in): ರಾಜ್ಯದ ವಿದ್ಯುತ್ ಬಳಕೆದಾರರಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು, ವಿದ್ಯುತ್ ದರ ಇಳಿಕೆ ಮಾಡಿ ಆದೇಶಿಸಿದೆ.
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಹೊಸ ದರ ಪರಿಷ್ಕರಣೆ ಮಾಡಿದ್ದು, ವಿದ್ಯುತ್ ದರ ಇಳಿಕೆ ಮಾಡಿ ಇಂದು ಆದೇಶ ಹೊರಡಿಸಿದೆ. 100 ಯೂನಿಟ್ ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯೂನಿಟ್ ಮೇಲೆ 1 ರೂಪಾಯಿ 10 ಪೈಸೆ ಇಳಿಕೆ ಮಾಡಲಾಗಿದೆ. ಅದೇ ರೀತಿಯಾಗಿ ವಾಣಿಜ್ಯ ಬಳಕೆದಾರರಿಗೆ 1 ರೂಪಾಯಿ 25 ಪೈಸೆ ದರ ಇಳಿಕೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹಾಗೆಯೇ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಯೂನಿಟ್ ಗೆ 40 ಪೈಸೆ ಕಡಿತ ಮಾಡಲಾಗಿದ್ದು ಖಾಸಗಿ ಏತ ನೀರಾವರಿ ಬಳಕೆದಾರರಿಗೆ 2 ರೂಪಾಯಿ ಇಳಿಕೆ ಮಾಡಲಾಗಿದೆ. 100 ಯೂನಿಟ್ಗಿಂತ ಹೆಚ್ಚು ಬಳಸುವವರಿಗೆ ಮಾತ್ರ ಹೊಸ ದರ ಮಾರ್ಚ್1 ರಿಂದಲೇ ಅನ್ವಯವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
Key words: government – reduced- electricity -rates – state.