ಬೆಂಗಳೂರು,ಮಾರ್ಚ್,9,2024(www.justkannada.in): ಲೋಕಸಭಾ ಚುನಾವಣೆಗೆ ಮೂರ್ನಾಲ್ಕು ದಿನಗಳಲ್ಲಿ ಅಭ್ಯರ್ಥಿ ಆಯ್ಕೆ ಅಂತಿಮಗೊಳ್ಳಲಿದೆ. 2 ಹಂತಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯದಲ್ಲಿ ಬಿಜೆಪಿ ಪರವಾದ ವಾತಾವರಣವಿದೆ. ಪ್ರಧಾನಿ ನರೇಂದ್ರ ಮೋದಿಯವರ ಯೋಜನೆಗಳನ್ನು ಜನರು ಮೆಚ್ಚಿದ್ದಾರೆ. ನರೇಂದ್ರ ಮೋದಿ ನಾಯಕತ್ವ ಉತ್ತಮ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. 28 ಲೋಕಸಭಾ ಕ್ಷೇತ್ರಗಳಲ್ಲೂ ಅಭ್ಯರ್ಥಿ ಆಯ್ಕೆ ಮುಂದುವರೆದಿದೆ. ರಾಜ್ಯದ ಎಲ್ಲ ಅಭ್ಯರ್ಥಿ ಬಗ್ಗೆಯೂ ವರಿಷ್ಠರು ಅವಲೋಕಿಸಿದ್ದು, ಮೂರ್ನಾಲ್ಕು ದಿನಗಳಲ್ಲಿ ಅಭ್ಯರ್ಥಿ ಅಯ್ಕೆ ಅಂತಿಮಗೊಳ್ಳಲಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ನೀರಿನ ಹಾಹಾಕಾರ ಇದೆ. ಬರ ನಿರ್ವಹಣೆಗೆ ಪೂರ್ವ ತಯಾರಿ ಮಾಡಿಲ್ಲ. ಸುಮ್ಮನೇ ಕೇಂದ್ರ ಸರ್ಕಾರದತ್ತ ಆರೋಪ ಮಾಡುತ್ತಿದ್ದಾರೆ. ಆದೇಶಕ್ಕೂ ಮುನ್ನ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ. ಈಗ ನೀರಿನ ಸಮಸ್ಯೆ ಸೃಷ್ಟಿಯಾಗಿದೆ, ಈಗ ಏನಂತಾರೆ ಡಿಕೆ ಶಿವಕುಮಾರ್? ಹೀಗಾಗಿ ಸರ್ಕಾರದ ವಿರುದ್ಧ ಸೋಮವಾರ ಹೋರಾಟ ಮಾಡುತ್ತೇವೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.
Key words: Final selection – candidates – three – four days – BY Vijayendra.