ನವದೆಹಲಿ, ಏಪ್ರಿಲ್, 8,2024 (www.justkannada.in): ಕರ್ನಾಟಕಕ್ಕೆ ಬರಪರಿಹಾರ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ವಾರಗಳಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ಭರವಸೆ ನೀಡಿದೆ.
ಕೇಂದ್ರ ಸರ್ಕಾರದಿಂದ ಬರ ಪರಿಹಾರ ಕೊಡಿಸುವಂತೆ ಕೋರಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, “ಎಲ್ಲ ವಿಚಾರಗಳಿಗೂ ರಾಜ್ಯಗಳು ಸುಪ್ರೀಂಕೋರ್ಟ್ಗೆ ಬರಬೇಕಾ?” ಎಂದು ಕೇಂದ್ರ ಸರ್ಕಾರಕ್ಕೆ ಪ್ರಶ್ನಿಸಿತು.
ಇದಕ್ಕೆ, “ಎರಡು ವಾರದಲ್ಲಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ” ಎಂದು ಕೇಂದ್ರ ಸರ್ಕಾರ ಪರವಾಗಿ ವಾದ ಮಂಡಿಸಿದ ವಕೀಲ ಎಸ್‌ಜಿ ಮೆಹ್ತಾ ಕೋರ್ಟ್ ತಿಳಿಸಿದರು.
ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಕಳೆದ ವರ್ಷ ಡಿಸೆಂಬರ್ನಲ್ಲೇ ಕರ್ನಾಟಕ ಸರ್ಕಾರ ಮನವಿ ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ. ಹೀಗಾಗಿ ಸುಪ್ರೀಂಕೋರ್ಟ್ನಲ್ಲಿ ಕರ್ನಾಟಕ ಸರ್ಕಾರ ಅರ್ಜಿ ಸಲ್ಲಿಸಿದೆ ಎಂದು ಕರ್ನಾಟಕ ಸರ್ಕಾರ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರು.
Key words: Karnataka, drought relief, Supreme Court