ಯಾದಗಿರಿ, ಮೇ 1,2024 (www.justkannada.in): ಹೆಚ್.ಡಿ ದೇವೇಗೌಡರೇ ಪ್ಲಾನ್ ಮಾಡಿ ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳುಹಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವೀಸಾ ಕೊಡುವುದು ಯಾರು? ಕೇಂದ್ರದ ಬಿಜೆಪಿಯವರೇ ತಾನೇ..? ಎಸ್ ಐಟಿಯಿಂದ ಪಾರದರ್ಶಕವಾಗಿ ತನಿಖೆಯಾಗುತ್ತೆ. ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಎಲ್ಲ ವಿಚಾರ ಗೊತ್ತಿದ್ದರೂ ಯಾಕೆ ಪ್ರಜ್ವಲ್ಗೆ ಟಿಕೆಟ್ ಕೊಟ್ಟರು. ಸೆಕ್ಸ್ ಸ್ಕ್ಯಾಂಡಲ್ ನಲ್ಲಿ ಸಿಲುಕಿದವನಿಗೆ ಯಾಕೆ ಟಿಕೆಟ್ ಕೊಟ್ಟರು. ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಮಾಡಲಾಗಿದೆ. ಎಸ್ಐಟಿ ಅಧಿಕಾರಿಗಳು ಪಾರದರ್ಶಕವಾಗಿ ತನಿಖೆ ಮಾಡುತ್ತಾರೆ. ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಎಂದರು.
ಪೆನ್ಡ್ರೈವ್ ಹಿಂದೆ ಡಿಕೆ ಶಿವಕುಮಾರ್ ಕೈವಾಡ ಇದೆ ಎಂಬ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಕಾರ್ತಿಕ್ ಎಂಬಾತ ಪ್ರಜ್ವಲ್ ರೇವಣ್ಣರ ಕಾರು ಚಾಲಕ ಆಗಿದ್ದ. ಕಾರ್ತಿಕ್ ಬಿಜೆಪಿ ಮುಖಂಡನ ಕೈಯಲ್ಲಿ ಪೆನ್ಡ್ರೈವ್ ಕೊಟ್ಟಿದ್ದ. ಅದನ್ನು ಆತನೇ ಹೇಳಿಕೊಂಡಿದ್ದಾನೆ. ಹೆಚ್ಡಿಕೆ ಕೇವಲ ರಾಜಕಾರಣಕ್ಕಾಗಿ ಡಿಕೆ ಶಿವಕುಮಾರ್ ಮೇಲೆ ಆರೋಪ ಮಾಡುತ್ತಿದ್ದಾರೆ. ಪ್ರಜ್ವಲ್ ಪ್ರಕರಣಕ್ಕೂ ಡಿಸಿಎಂ ಡಿಕೆ ಶಿವಕುಮಾರ್ಗೂ ಸಂಬಂಧ ಇಲ್ಲ ಎಂದರು.
Key words: HD Deve Gowda, Prajwal Revanna, CM Siddaramaiah