ಶಿವಮೊಗ್ಗ,ಮೇ,2,2024 (www.justkannada.in): ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಶಿವಮೊಗ್ಗದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾವು ಕೇಳಿದ್ದು ಎನ್ ಡಿಆರ್ ಎಫ್ ಹಣ, ಭಿಕ್ಷೆಯಲ್ಲ. ಕೋರ್ಟ್ ಹೇಳಿದ ಮೇಲೆ ಪರಿಹಾರ ನೀಡಿದೆ. ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತದೆ. ಪ್ರಧಾನಿ ಮೋದಿ ಅವರು ಚುನಾವಣೆಗಾಗಿ ಮಾತ್ರ ಬರ್ತಾರೆ ಬರ, ಪ್ರವಾಹದ ಸಮಯದಲ್ಲಿ ರಾಜ್ಯಕ್ಕೆ ಬರಲ್ಲ ಎಂದು ಹರಿಹಾಯ್ದರು.
ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಕೊಡುವುದಾಗಿ 2023-24ನೇ ಬಜೆಟ್ ನಲ್ಲಿ ಘೋಷಿಸಿದ್ದ ನಿರ್ಮಲಾ ಸೀತಾರಾಮನ್ ಒಂದು ರೂಪಾಯಿ ಕೊಡಲಿಲ್ಲ. ರಾಜ್ಯದಲ್ಲಿ ಭೀಕರ ಬರಗಾಲವಿದೆ ಎಂದು ಸೆಪ್ಟೆಂಬರ್ ನಲ್ಲೇ ಮನವಿ ಕೊಟ್ಟಿದ್ದರೂ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡಲಿಲ್ಲ. ಕೋರ್ಟ್ ಗೆ ಹೋದ ನಂತರ ಈಗ ಅಲ್ಪ ಅನುದಾನ ಕೊಟ್ಟಿದ್ದಾರೆ. ನಾವು ಎನ್.ಡಿ.ಆರ್.ಎಫ್ ನಿಂದ 18,172 ಕೋಟಿ ರೂ. ಕೊಡಿ ಎಂದು ಕೇಳಿದ್ದೆವು. ಆದರೆ ಒಂದು ರೂಪಾಯಿ ಕೊಡಲಿಲ್ಲ. ಅನಿವಾರ್ಯವಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ನಂತರ ಅಲ್ಪ ಅನುದಾನ ಕೊಟ್ಟಿದ್ದಾರೆ ಎಂದು ಕಿಡಿಕಾರಿದರು.
Key words: Injustice, state, Modi, CM Siddaramaiah