ಮಾಜಿ ಸಚಿವ ಹೆಚ್ ಡಿ ರೇವಣ್ಣ ಜಾಮೀನು ಅರ್ಜಿ ಬಗ್ಗೆ ಆದೇಶ ಕಾಯ್ದಿರಿಸಿದ ಕೋರ್ಟ್

ಬೆಂಗಳೂರು,ಮೇ,13.2024 (www.justkannada.in):  ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹೆಚ್.ಡಿ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇದೀಗ ಆದೇಶ ಕಾಯ್ದಿರಿಸಿದೆ.

ಇಂದು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ವಾದ ಪ್ರತಿವಾದ ಆಲಿಸಿದ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅರ್ಜಿ ಬಗ್ಗೆ ಆದೇಶವನ್ನ ಕಾಯ್ದಿರಿಸಿದ್ದಾರೆ.

ಸಾಧ್ಯವಾದರೇ 5 ಗಂಟೆ ವೇಳೆಗೆ ಆದೇಶ ಪ್ರಕಟ ಮಾಡಲಾಗುತ್ತದೆ ಎಂದು ಜಡ್ಜ್ ತಿಳಿಸಿದ್ದಾರೆ.  ಜಾಮೀನಿನ ನಿರೀಕ್ಷೆಯಲ್ಲಿ ಹೆಚ್ ಡಿ ರೇವಣ್ಣ ಅವರ ಕುಟುಂಬ ಕಾದು ಕುಳಿತಿದೆ.

Key words: Court, reserved, HD Revanna, bail application