ಬೆಂಗಳೂರು,ಮೇ,18,2024 (www.justkannada.in): ಜೂನ್ 3ರಂದು ರಾಜ್ಯದ 6 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಈ ಮಧ್ಯೆ ನೈರುತ್ಯ ಪದವೀಧರರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ ಸಂಬಂಧಿಸಿದಂತೆ ನಾಮಪತ್ರ ಅಂಗೀಕಾರ ತಿರಸ್ಕೃತ ಪಟ್ಟಿ ಬಿಡುಗಡೆಯಾಗಿದೆ.
ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ ಸಂಬಂಧಿಸಿದಂತೆ ಮೇ 09 ರಿಂದ ಮೇ 16 ರವರೆಗೆ ಸ್ವೀಕೃತವಾದ ನಾಮಪತ್ರಗಳ ಪರಿಶೀಲನೆಯನ್ನು ಮೇ 17(ನಿನ್ನೆ) ರಂದು ನಡೆಸಲಾಗಿದೆ. ನಾಮಪತ್ರಗಳ ಪರಿಶೀಲನೆಯಲ್ಲಿ ಕ್ಷೇತ್ರವಾರು, ನಾಮಪತ್ರಗಳು ಅಂಗೀಕಾರ ಮತ್ತು ತಿರಸ್ಕೃತವಾಗಿರುವ ಪಟ್ಟಿ ಬಿಡುಗಡೆ ಮಾಡಲಾಗಿದೆ.
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 13 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 13 ಅಭ್ಯರ್ಥಿಗಳ ನಾಮಪತ್ರ ಅಂಗೀಕರವಾಗಿದೆ. ನೈರುತ್ಯ ಪದವೀಧರರ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 11 ಅಭ್ಯರ್ಥಿಗಳ ನಾಮಪತ್ರ ಅಂಗೀಕರವಾಗಿದೆ.
ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 10 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 09 ಅಭ್ಯರ್ಥಿಗಳ ನಾಮಪತ್ರ ಅಂಗೀಕರವಾಗಿದ್ದು, ಪಕ್ಷೇತರ ಅಭ್ಯರ್ಥಿಯಾದ ಎಂ.ಸತೀಶ್ ಕಾರಂತ್ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ಮೇ 17 ರಿಂದ ಮೇ 20ರ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರಗಳನ್ನು ಹಿಂಪಡೆಯಲು ಅವಕಾಶವಿರುತ್ತದೆ ಎಂದು ಕರ್ನಾಟಕ ವಿಧಾನಪರಿಷತ್ ನೈರುತ್ಯ ಪದವೀಧರ ಕ್ಷೇತ್ರ, ನೈರುತ್ಯ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Key words: MLC-Election-nomination- Verification