ಬೆಂಗಳೂರು,ಜೂನ್,3,2024 (www.justkannada.in): ಸಂತ್ರಸ್ತ ಮಹಿಳೆ ಕಿಡ್ನಾಪ್ ಪ್ರಕಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಭವಾನಿ ರೇವಣ್ಣ ಇದೀಗ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಭವಾನಿ ರೇವಣ್ಣ ಪರ ವಕೀಲರು ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣಗೆ ಬಂಧನ ಭೀತಿ ಎದುರಾಗಿದ್ದು, ನಿರೀಕ್ಷಣಾ ಜಾಮೀನಿಗಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.
ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನ ಸೆಷನ್ಸ್ ಕೋರ್ಟ್ ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಎಸ್ಐಟಿ ಅಧಿಕಾರಿಗಳು ವಿಚಾರಣೆಗೆಂದು ಹೊಳೆನರಸೀಪುರದಲ್ಲಿರುವ ನಿವಾಸಕ್ಕೆ ತೆರಳಿದ ವೇಳೆ ಭವಾನಿ ರೇವಣ್ಣ ಅಲ್ಲಿರಲಿಲ್ಲ. 15 ದಿನಗಳ ಹಿಂದೆಯೇ ಅವರು ನಿಗೂಢ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ.
Key words: Bhavani Revanna – high court –bail- application