ಹುಬ್ಬಳ್ಳಿ,ಜೂನ್,13,2024 (www.justkannada.in): ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್ ಸೇರಿ 13 ಮಂದಿಯನ್ನ ಪೊಲೀಸರು ವಿಚಾರಣೆ ನಡೆಸುತ್ತಿದ್ದು ಈ ಕುರಿತು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾತನಾಡಿರುವ ಬಸವರಾಜ ಬೊಮ್ಮಾಯಿ, ಕಾನೂನಿನ ಮುಂದೆ ಎಲ್ಲರೂ ಸಮಾನರು. ಕಾನೂನು ಕೈಗೆ ತೆಗೆದುಕೊಳ್ಳುವುದೇ ಒಂದು ಅಪರಾಧ. ರೇಣುಕಾಸ್ವಾಮಿ ಮರ್ಡರ್ ಪ್ರಕರಣ ಗಂಭೀರವಾಗಿ ತೆಎದುಕೊಳ್ಳಿ. ಚುರುಕುತನ ನಿಯತ್ತಿನಿಂದ ತನಿಖೆ ನಡೆಸಬೇಕು. ಅಮಾನವೀಯವಾಗಿ ವರ್ತಿಸುವ ಅಧಿಕಾರ ಯಾರಿಗೂ ಇಲ್ಲ ಈ ಪ್ರಕರಣ ಗಂಭೀರವಾಗಿ ತೆಗೆದುಕೊಳ್ಳಬೇಕು. ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂದರು.
ದರ್ಶಣ್ ಕೇಸ್ ನಲ್ಲಿ ಆರಂಭದಲ್ಲಿ ತನಿಖೆ ಚುರುಕಾಗಿ ನಡೆಯುತ್ತಿದೆ ಕೊನೆವರೆಗೂ ಇದೇ ಚುರುಕುತನ ನಿಯತ್ತು ಇರಲಿ. ನಿಯತ್ತಿನ ತನಿಖೆ ಇದ್ದರೇ ಮಾತ್ರ ಆರೋಪಿಗಳಿಗೆ ಶಿಕ್ಷೆಯಾಗುತ್ತದೆ ಎಂದು ಬೊಮ್ಮಾಯಿ ತಿಳಿಸಿದರು.
Key words: Renukaswamy, murder, case, Basavaraja Bommai.