ಚಾಮರಾಜನಗರ,ಸೆ,19,2019(www.justkannada.in): ಅಕ್ರಮ ಮರಳು ಗಣಿಗಾರಿಕೆ ಮೇಲೆ ಪೊಲೀಸರು ದಾಳಿ ನಡೆಸಿ ಎರಡು ಟ್ರ್ಯಾಕ್ಟರ್ ಮತ್ತು ಮರಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಕಾವೇರಿ ನದಿಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದು ಚಾಮರಾಜನಗರ ಎಸ್ಪಿ ಆನಂದ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದರು. ಈ ವೇಳೆ ಅಕ್ರಮ ಮರಳು ದಾಸ್ತಾನು ಹಾಗೂ ಎರಡು ಟ್ರಾಕ್ಟರ್ ವಶಕ್ಕೆ ಪಡೆದರು.
ಶಿವನಸಮುದ್ರ, ಧನಗೆರೆ, ಎಡಕುರಿಯ ಗ್ರಾಮಗಳಲ್ಲಿ ಮರಳನ್ನ ಅಕ್ರಮವಾಗಿ ಸಂಗ್ರಹಿಸಲಾಗಿತ್ತು. ಚಾಮರಾಜನಗರ ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನ ಡೆಯಲು ಬಿಡೋಲ್ಲ. ಸರ್ಕಾರದ ಅನುಮತಿ ಪಡೆಯದೆ ಮರಳು ಗಣಿಗಾರಿಕೆ ನಡೆಸಿದರೆ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಚಾಮರಾಜನಗರ ಎಸ್ ಪಿ ಆನಂದ್ ಕುಮಾರ್ ಅಕ್ರಮ ಮರಳು ಗಣಿಗಾರಿಕೆ ಮಾಡುವವರಿಗೆ ಎಚ್ಚರಿಕೆ ನೀಡಿದರು. ಎಸ್ಪಿ ಆನಂದ್ ಕುಮಾರ್ ದಾಳಿಗೆ ಅಕ್ರಮ ಮರಳು ಸಾಗಾಣಿಕೆದಾರರು ಬೆಚ್ಚಿ ಬಿದ್ದಿದ್ದಾರೆ.
Key words: chamarajanagar- illegal -sand mining- Attack -police