ಮಂಗಳೂರು,ಜುಲೈ,5,2024 (www.justkannada.in) : ಡೆಂಗ್ಯೂ ಟೆಸ್ಟಿಂಗ್ ದರ ಹೆಚ್ಚಳ ಮಾಡಿದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆಸ್ಪತ್ರೆಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರವ್ ಎಚ್ಚರಿಕೆ ನೀಡಿದರು.
ಈ ಕುರಿತು ಇಂದು ಮಾತನಾಡಿದ ದಿನೇಶ್ ಗುಂಡೂರಾವ್, ನಿಂತ ನೀರಿನಲ್ಲಿ ಸೊಳ್ಳೆ ಉತ್ಪತ್ತಿಯಾಗುತ್ತಿವೆ. ಅದನ್ನು ಮೊದಲು ನಿಯಂತ್ರಿಸಬೇಕು. ಆದರೆ ಜನತೆ ಇದನ್ನ ಗಂಭೀರವಾಗಿ ಪರಿಗಣಿಸಿಲ್ಲ. ಇನ್ನು ಡೆಂಗ್ಯೂ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುವ ವ್ಯವಸ್ಥೆ ಆಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲೇ 153 ಪ್ರಕರಣಗಳು ಪತ್ತೆಯಾಗಿದೆ. ಡೆಂಗ್ಯೂ ನಿಯಂತ್ರಣಕ್ಕೆ ಸರ್ಕಾರ ಕ್ರಮಕ್ಕೆ ಮುಂದಾಗಿದೆ.
Key words: action, Dengue testing, rates, increased, Dinesh Gundurav