ಬೆಂಗಳೂರು,ಜುಲೈ,11,2024 (www.justkannada.in): ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದೆ ಎಂಬ ಬಸವರಾಜ ರಾಯರೆಡ್ಡಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಡಿ.ಕೆ ಶಿವಕುಮಾರ್, ಚುನಾವಣೆ ಮುನ್ನ ನಾವು ಕೊಟ್ಟಿದ್ದ ಮಾತನ್ನು ಉಳಿಸಿಕೊಂಡಿದ್ದೇವೆ. ಕಳೆದ ವರ್ಷ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಅನ್ನು ನಾವು ಪುನರ್ ಪರಿಶೀಲಿಸಿ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೆವು. ಈ ಬಾರಿಯ ಬಜೆಟ್ ನಲ್ಲಿ 50 ಸಾವಿರ ಕೋಟಿಗೂ ಹೆಚ್ಚು ಹಣ ಮೀಸಲಿಟ್ಟಿದ್ದೇವೆ. ನಾವು ಮತಕ್ಕಾಗಿ ಗ್ಯಾರಂಟಿ ಯೋಜನೆ ಜಾರಿ ಮಾಡಿಲ್ಲ. ಜನರ ಬದುಕಿನಲ್ಲಿ ಬದಲಾವಣೆ ತರಲು ಈ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದರು.
ಪ್ರತಿನಿತ್ಯ ತಮಿಳುನಾಡಿಗೆ 1 ಟಿಎಂಸಿ ನೀರು ಹರಿಸಬೇಕು ಎಂಬ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್, ಜಲಾಶಯದಲ್ಲಿ ಇನ್ನು ನಿರೀಕ್ಷಿತ ಮಟ್ಟದಲ್ಲಿ ನೀರಿನ ಸಂಗ್ರಹವಾಗಿಲ್ಲ. ಈ ಬಗ್ಗೆ ನಾನು ಈಗಲೇ ಏನು ಪ್ರತಿಕ್ರಿಯೆ ನೀಡಲ್ಲ. ಇನ್ನಷ್ಟು ಮಳೆ ಬೀಳಲಿ ಎಂದು ಎಲ್ಲರೂ ಪ್ರಾರ್ಥಿಸೋಣ” ಎಂದು ಹೇಳಿದರು.
Key words: financial, guarantee, schemes, DCM, DK Shivakumar