ಮೈಸೂರು,ಜುಲೈ,17,2024 (www.justkannada.in): ಕೇರಳ ವಯನಾಡು ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಹೊರ ಹರಿವು ಮತ್ತಷ್ಟು ಹೆಚ್ಚಳವಾಗಿದೆ.
ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿರುವ ಕಬಿನಿ ಜಲಾಶಯಕ್ಕೆ 33, 649 ಕ್ಯೂಸೆಕ್ ನೀರು ಬರುತ್ತಿದ್ದು, 33, 741 ನೀರನ್ನ ಹೊರಬಿಡಲಾಗುತ್ತಿದೆ. ಇನ್ನು 19.59 ಟಿಎಂಸಿ ನೀರು ಸಂಗ್ರಹದ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ 18.44 ಟಿಎಂಸಿ ನೀರು ಸಂಗ್ರಹವಾಗಿದೆ.
Key words: increase, discharge, Kabini Reservoir