ಮೈಸೂರು,ಸೆ,21,2019(www.justkannada.in): ರಾಜ್ಯದ 15 ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ನಿಗದಿಯಾಗುತ್ತಿದ್ದಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಜೆಡಿಎಸ್ ಏಕಾಂಗಿ ಸ್ಪರ್ಧೆ ಮಾಡುತ್ತದೆ ಎಂದು ಘೋಷಣೆ ಮಾಡಿದ್ದಾರೆ.
ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ವತಂತ್ರವಾಗಿ ಸ್ಪರ್ಧಿಸುತ್ತಾರೆ. ಹುಣಸೂರಿನಲ್ಲಿ ನಮ್ಮ ಅಭ್ಯರ್ಥಿ ಗೆಲ್ಲಲೇ ಬೇಕು. ಸಾಕಷ್ಟು ತ್ಯಾಗ ಮಾಡಿದ ಕ್ಷೇತ್ರ ಅದು. ಹೀಗಾಗಿ ಕ್ಷೇತ್ರದ ಅಭ್ಯರ್ಥಿ ಗೆಲುವಿಗೆ ಸಮಯ ನೀಡುತ್ತೇನೆ ಎಂದರು.
ಇದೇ ವೇಳೆ ಕಾಂಗ್ರೆಸ್ ವಿರುದ್ದ ಅಸಮಾಧಾನ ಹೊರ ಹಾಕಿದ ಹೆಚ್.ಡಿ ಕುಮಾರಸ್ವಾಮಿ, ಕಾಂಗ್ರೆಸ್ ಗೆ ಬಿಜೆಪಿಗಿಂತ ಮೊದಲ ಶತ್ರು ಜೆಡಿಎಸ್ . ಆದರೆ ಕಾಂಗ್ರೆಸ್ ಜೆಡಿಎಸ್ ಜಗಳದಿಂದ ಬಿಜೆಪಿಗೆ ಸಹಕಾರಿಯಾಗುವುದಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ನನಗೆ ಬೆಂಬಲ ಇರಲಿಲ್ಲ. ನನ್ನದು ಅತ್ಯಂತ ಕೆಟ್ಟ ಸರ್ಕಾರ. ಆದರೂ ರೈತರ ಸಾಲಮನ್ನಾ ಮಾಡಿದ್ದೇನೆ. ನಾನು ಮೋಸ ಮಾಡಿಲ್ಲ ಎಂದು ತಿಳಿಸಿದರು.
ಕಳೆದ ವಿಧಾನಸಭೆ ಚುನಾವಣೆ ಬಳಿಕ ದೋಸ್ತಿ ಮಾಡಿಕೊಂಡು ಅಧಿಕಾರ ಗದ್ದುಗೆ ಹಿಡಿದಿದ್ದ ಜೆಡಿಎಸ್- ಕಾಂಗ್ರೆಸ್ ನ ಮೈತ್ರಿ ಅಂತ್ಯಗೊಂಡಿದೆ.
Key words: JDS – contest – by-election-Declaration – former CM -HD Kumaraswamy.