ಬೆಂಗಳೂರು,ಜುಲೈ,27,2024 (www.justkannada.in): ಕೆಎಸ್‌ಆರ್ ಟಿಸಿ ಬಸ್ ಪ್ರಯಾಣ ದರ ಶೇ 15 ರಿಂದ ಶೇ 20 ರಷ್ಟು ಏರಿಕೆಗೆ ಸಾರಿಗೆ ನಿಗಮಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ ಎನ್ನಲಾಗಿದ್ದು, ಈ ಕುರಿತು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಬಸ್ ಪ್ರಯಾಣ ದರ ಏರಿಕೆಗೆ ಕೆಎಸ್ ಆರ್ ಟಿಸಿ ಪ್ರಸ್ತಾವನೆ ಸಲ್ಲಿಸಿದೆ. ಆದರೆ ಬಸ್ ಟಿಕೆಟ್ ದರ ಏರಿಕೆಗೆ ತೀರ್ಮಾನ ಮಾಡಿಲ್ಲ. ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ ಮಾಡಲಾಗುತ್ತದೆ ಎಂದರು.
ಸಿಬ್ಬಂದಿ ವೇತನ, ಡೀಸೆಲ್, ಬಿಡಿ ಭಾಗಗಳ ಬೆಲೆ ಹೆಚ್ಚಳದಿಂದ ನಿಗಮಗಳು ಆರ್ಥಿಕವಾಗಿ ಸದೃಢವಾಗಿಲ್ಲ. ಹೀಗಾಗಿ ಶೇ 15 ರಿಂದ 20 ರಷ್ಟು ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿವೆ ಎನ್ನಲಾಗಿದ್ದು, ಕೆಲವೇ ದಿನಗಳಲ್ಲಿ ಸಿಎಂ ಸಭೆ ನಡೆಸಿ ದರ ಹೆಚ್ಚಳ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ
Key words: Proposal, increase, bus fare, Minister, Ramalingareddy