ಸಿಎಂ ‌ಸೂಚನೆ ಮೇರೆಗೆ ವಯನಾಡಿಗೆ ತೆರಳಿದ ಸಚಿವ ಸಂತೋಷ್ ಲಾಡ್

ನವದೆಹಲಿ ಜುಲೈ,31,2024 (www.justkannada.in): ಕೇರಳದ ವಯನಾಡಿನಲ್ಲಿ ಭೂಕುಸಿತದಿಂದ ಸಾವು ನೋವು ಸಂಭವಿಸಿದ್ದು ಅಲ್ಲಿರುವ ಕನ್ನಡಿಗರ ರಕ್ಷಣೆ ಹೊಣೆಯನ್ನ ಕಾರ್ಮಿಕ ಸಚಿವ ಸಂತೋಷ್ ಲಾಡ್ ಗೆ ವಹಿಸಲಾಗಿದ್ದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ.

ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ ರಕ್ಷಣೆ ಸೇರಿದಂತೆ ಅಗತ್ಯ ಎಲ್ಲಾ ರೀತಿಯ ನೆರವುಗಳಿಗೆ ಕೇರಳ ಸರ್ಕಾರದ ಜೊತೆ ಕೈ ಜೋಡಿಸಿ ಜನರ ಜೀವ, ಆರೋಗ್ಯ ರಕ್ಷಣೆಗೆ ನೆರವಾಗುವಂತೆ ಸಿಎಂ ಸಿದ್ದರಾಮಯ್ಯ ದೂರವಾಣಿ ಮೂಲಕ ಸೂಚನೆ ನೀಡಿದ್ದಾರೆ.

ದೂರವಾಣಿ ಕರೆ ಸ್ವೀಕರಿಸುತ್ತಿದ್ದಂತೆ ವಯನಾಡಿಗೆ ಹೊರಟ ಸಚಿವ ಸಂತೋಷ್ ಲಾಡ್ ಸದ್ಯ ಕೇರಳ ರಾಜ್ಯದ ಮುಖ್ಯಮಂತ್ರಿ ಕಚೇರಿ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ.

ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ತುರ್ತು ಮತ್ತು ಕ್ಷಿಪ್ರ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಅಗತ್ಯ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಲಾಡ್ ತಿಳಿಸಿದ್ದಾರೆ.

ENGLISH SUMMARY

Minister Santhosh Lad leaves for Wayanad on instructions of the Chief Minister

Delhi July 31: On the instructions of Chief Minister Siddaramaiah, Labour Minister Santosh Lad has left for flood affected Wayanad.

The Chief Minister gave an instruction over the phone to join hands with the Kerala government to provide all necessary assistance including relief works and rescue of the victims in the flood-affected areas to help protect the lives and health of the people.

Minister Santosh Lad, who left for Wayanad on receiving the phone call, is currently in constant touch with the Chief Minister’s office of Kerala State.

The Chief Minister has instructed to take urgent and rapid measures for the rescue of Kannadigas caught in the disaster. All necessary steps are being taken in this regard, he said.

Key words: Minister, Santosh Lad, Wayanad, landslide