ಎಸ್.ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ : ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಆಗಸ್ಟ್ 8, 2024 (www.justkannada.in): ಕರ್ನಾಟಕದ ಅಭಿವೃದ್ದಿ ಪಥಕ್ಕೆ ಅಡಿಗಲ್ಲು ಹಾಕಿದ ಎಸ್ ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ . ನಿಜಲಿಂಗಪ್ಪ ಅವರ ಪುಣ್ಯತಿಥಿ ಅಂಗವಾಗಿ ಅವರ ಪ್ರತಿಮೆಗೆ ನಮನ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಕನ್ನಡನಾಡಿನ ಅಭಿವೃದ್ಧಿಗೆ ಕೊಡುಗೆ ನೀಡಿದ ದಿವಂಗತ  ಎಸ್ ನಿಜಲಿಂಗಪ್ಪ ಅವರು ಇಂದಿಗೂ ಜನಮಾನಸದಲ್ಲಿ ನೆಲೆಸಿದ್ದಾರೆ. ಅವರು ಈ ದೇಶ ಕಂಡ ಪ್ರಾಮಾಣಿಕ ರಾಜಕಾರಣಿ. ಮೌಲ್ಯಯುತ ರಾಜಕೀಯ ಜೀವನವನ್ನು ನಡೆಸಿಕೊಂಡು ಬಂದ ನಿಜಲಿಂಗಪ್ಪನವರು ನೀರಾವರಿ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ  ಕರ್ನಾಟಕ ಏಕೀಕರಣಕ್ಕೆ ಶ್ರಮಿಸಿದ್ದಾರೆ. ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕವಾಗಿವೆ ಎಂದರು.

ಬಿಜೆಪಿ , ಎನ್ ಡಿಎ ಸರ್ಕಾರ ಅಲ್ಪಸಂಖ್ಯಾತ ವಿರೋಧಿ

ಸಂಸತ್ ನಲ್ಲಿ ಇಂದು ವಕ್ಫ್ ಬೋರ್ಡ್ ತಿದ್ದುಪಡಿ ಬಗ್ಗೆ ಬಿಲ್ ಮಂಡನೆಯಾಗುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ, ಬಿಜೆಪಿ ಹಾಗೂ ಎನ್ ಡಿಎ ಸರ್ಕಾರ ದೇಶದ ಅಲ್ಪಸಂಖ್ಯಾತರ ವಿರೋಧಿಗಳು ಎಂಬುದನ್ನು  ಅವರ ಈ ನಡೆ ನಿರೂಪಿಸುತ್ತಿದೆ. ಅವರು ಜಾತ್ಯಾತೀತ, ಸಾಮಾಜಿಕ ನ್ಯಾಯದ ಸಿದ್ದಾಂತಗಳನ್ನು ಬೆಂಬಲಿಸದ ಕೋಮುವಾದಿ ಪಕ್ಷವಾಗಿದ್ದಾರೆ ಎಂದು ತಿಳಿಸಿದರು

ಮುಖ್ಯಮಂತ್ರಿಯವರ ಹಾಗೂ ಬಿ.ಕೆ ಹರಿಪ್ರಸಾದ್ ರ ಭೇಟಿಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಬಿ.ಕೆ.ಹರಿಪ್ರಸಾದ್ ಅವರು ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದು, ಉಭಯ ಕುಶಲೋಪರಿ ಮಾತುಕತೆ ನಡೆಸಲಾಗಿದೆ ಎಂದರು.

Key words: S. Nijalingappa, ideals, inspiring, CM Siddaramaiah