ಬೆಂಗಳೂರು,ಆಗಸ್ಟ್,15,2024 (www.justkannada.in): ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಚರ್ಚೆಯಾಗುತ್ತಿರುವ ಬೆನ್ನಲ್ಲೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದು ರಾಜ್ಯದ ಜನತೆಗೆ ಅಭಯ ನೀಡಿದ್ದಾರೆ.
78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಇದರ ಬದಲಿಗೆ ಇನ್ನಷ್ಟು ಹೆಚ್ಚು ನೆರವಾಗುವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
ನಮ್ಮ ಸರ್ಕಾರ 5 ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಜನರ ಜೀವನ ಮಟ್ಟ ಸುದಾರಿಸುವಂತೆ ಮಾಡಿದೆ. ಗೃಹಲಕ್ಷ್ಮಿ ಯೋಜನೆಯಡಿ 1.20 ಕೋಟಿ ಮಹಿಳೆಯರಿಗೆ ಅನುಕೂಲವಾಗಿದೆ, ಈವರೆಗೆ 25,258 ಕೊಟಿ ಹಣ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಆಗಿದೆ. ಈವರೆಗೆ 4.08 ಕೋಟಿ ಅನ್ನಭಾಗ್ಯ ಫಲಾನುಭವಿಗಳಿಗೆ ಪ್ರಯೋಜನೆ ಪಡೆದಿದ್ದಾರೆ. ಗೃಹಜ್ಯೋತಿ ಯೋಜನೆಗೆ 8,844 ಕೋಟಿ ರೂ. ನೀಡಲಾಗಿದೆ. ಯುವನಿಧಿ ಯೋಜನೆಗೆ 1.31 ಲಕ್ಷ ಪದವೀಧರ, ಡಿಪ್ಲೋಮಾ ನಿರುದ್ಯೋಗಿಗಳಿಗೆ ಸಹಾಯಧನ ನೀಡಲಾಗಿದೆ ಎಂದು ಹೇಳಿದರು.
Key words: guarantee scheme, not stop, CM Siddaramaiah