ಸರ್ಕಾರ ಅಸ್ಥಿರಕ್ಕೆ ಯತ್ನ: ಬಿಜೆಪಿಯಿಂದ ಸಂವಿಧಾನ ಬಾಹಿರ ಕೆಲಸ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಆಗಸ್ಟ್,17,2024 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿ ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ದಿನೇಶ್ ಗುಂಡೂರಾವ್,  ಶೋಕಾಸ್ ನೋಟಿಸ್ ಕೊಟ್ಟಾಗಲೇ ಗೊತ್ತಾಯ್ತು ಈ ಷಡ್ಯಂತ್ರ ನಡೆದಿದೆ ಎಂದು. ಕಾಂಗ್ರೆಸ್ ಸರ್ಕಾರವನ್ನ  ಅಸ್ಥಿರಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಈ ಪ್ರಕರಣದಲ್ಲಿ ಸಿಎಂ  ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ ಬಿಜೆಪಿಯವರಿಗೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆಯೇ ಇಲ್ಲ ಬಿಜೆಪಿಯವರು ಸಂವಿಧಾನಬಾಹಿರ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಯಾವುದೇ ಆಧಾರವಿಲ್ಲದೇ ಶೋಕಾಸ್ ನೋಟಿಸ್ ಕೊಟ್ಟರು ಸಿಎಂ ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಮಾಡಿಲ್ಲ. ಬಿಜೆಪಿ ಅವಧಿಯಲ್ಲೇ ಮುಡಾ ಸೈಟ್ ಕೊಟ್ಟಿದ್ದಾರೆ. ಪ್ರಧಾನಿ ಮೋದಿ, ಅಮಿತ್ ಶಾ ಕೆಳಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ಇದು ಬಿಜೆಪಿಯವರಿಗೆ ತಿರುಗುಬಾಣ ವಾಗುತ್ತೆ. ಸಿಎಂ  ಸಿದ್ದರಾಮಯ್ಯ ಜತೆ ಇಡೀ ಕಾಂಗ್ರೆಸ್ ಇದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

Key words: CM, prosecution, BJP, constitution, Minister, Dinesh Gundurao