ಬೆಂಗಳೂರು,ಆಗಸ್ಟ್,22,2024 (www.justkannada.in): ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಿಲುಕಿರುವ ನಡುವೆ ಇದೀಗ ಅಕ್ರಮ ಹಣ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸಂಕಷ್ಟ ಎದುರಾಗಿದೆ.
ಇಂದೇ ವಿಚಾರಣೆಗೆ ಹಾಜರಾಗುವಂತೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಲೋಕಾಯುಕ್ತಾ ನೋಟಿಸ್ ನೀಡಿದೆ. ಅಕ್ರಮ ಹಣ ಗಳಿಕೆ ಪ್ರಕರಣ ಸಂಬಂಧ ಇಂದು ಸಂಜೆ ಒಳಗೆ ವಿಚಾರಣೆಗೆ ಹಾಜರಾಗಬೇಕು ಎಂದು ಲೋಕಾಯುಕ್ತ ಸೂಚಿಸಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಗೂ ಸಂಕಷ್ಟ ಎದುರಾಗಿದೆ.
ಅಕ್ರಮ ಆಸ್ತಿಗಳಿಸಿರುವ ಆರೋಪದ ಮೇಲೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಈಗಾಗಲೇ ಲೋಕಾಯುಕ್ತ ದೂರು ದಾಖಲಿಸಿಕೊಂಡಿದೆ. ಇನ್ನು ಸಚಿವ ಸಂಪುಟ ಸಭೆ ಬಳಿಕ ಡಿಕೆ ಶಿವಕುಮಾರ್ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.
Key words: Lokayukta, notice, DCM, DK Shivakumar