ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಕೇಸ್: ಸುಪ್ರೀಂಕೋರ್ಟ್ ನಿಂದ ಕೆಜೆ ಜಾರ್ಜ್ ಗೆ ಬಿಗ್ ರಿಲೀಫ್

ನವದೆಹಲಿ, ಆಗಸ್ಟ್, 27,2024 (www.justkannada.in): ಡಿವೈಎಸ್‌ಪಿ ಎಂ. ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ. ಜಾರ್ಜ್‌ ಗೆ ಬಿಗ್ ರಿಲೀಫ್ ಸಿಕ್ಕಿದೆ.

ಡಿವೈಎಸ್‌ಪಿ ಎಂ. ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ  ಸಚಿವ ಕೆ.ಜೆ ಜಾರ್ಜ್ ಅವರ ಪಾತ್ರವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ. ಪ್ರಕರಣ ಸಂಬಂಧ ಈ ಹಿಂದೆ ತನಿಖೆ ನಡೆಸಿದ್ದ ಸಿಬಿಐ  ಮತ್ತು ಸಿಐಡಿ ತನಿಖಾ ತಂಡಗಳು ಬಿ ರಿಪೋರ್ಟ್ ಸಲ್ಲಿಸಿದ್ದವು. ಡಿವೈಎಸ್‌ಪಿ ಎಂ. ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ. ಜೆ. ಜಾರ್ಜ್ ಅವರ ಪಾತ್ರವಿಲ್ಲ ಎಂದು ತನಿಖಾ ವರದಿಯಲ್ಲಿ ಹೇಳಿದ್ದವು. ಈ ಸಂಬಂಧ ಕೆ. ಜೆ. ಜಾರ್ಜ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ಪ್ರತಿವಾದಿಗಳ ದೂರನ್ನು ತಳ್ಳಿಹಾಕಿತ್ತು.

ಇದನ್ನು ಪ್ರಶ್ನಿಸಿ ಮೃತ ಗಣಪತಿ ಅವರ ಸಹೋದರಿ ಸಬೀತಾ, ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಇಂದು ಈ ಅರ್ಜಿ ವಿಚಾರಣೆ ನಡೆಸಿದ ನಡೆಸಿದ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ನೇತೃತ್ವದ ದ್ವಿಸದಸ್ಯ ಪೀಠ, ಹೈಕೋರ್ಟ್ ​ನ ಆದೇಶವನ್ನು ಎತ್ತಿಹಿಡಿದಿದ್ದು, ಸಬೀತಾ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಸಚಿವ ಕೆಜೆ ಜಾರ್ಜ್​​ಗೆ ಬಿಗ್ ರಿಲೀಫ್ ಸಿಕ್ಕಿದೆ.

Key words: DySP Ganapathi suicide case,  KJ George, Supreme Court