ಬೆಂಗಳೂರು,ಆಗಸ್ಟ್,29,2024 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧಧ ಅಕ್ರಮ ಆಸ್ತಿ ಗಳಿಕೆ ಕೇಸ್‌ಗೆ ಸಂಬಂಧಿಸಿದಂತೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಈ ಕುರಿತು ಶಾಸಕ ಯತ್ನಾಳ್ ಟ್ವೀಟ್ ಮಾಡಿದ್ದಾರೆ.
ಹೈಕೋರ್ಟ್ ಅರ್ಜಿಯನ್ನ ವಜಾಗೊಳಿಸಿದ ಬೆನ್ನಲ್ಲೆ ಈ ಬಗ್ಗೆ ಟ್ವೀಟ್ ಮಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ , ಭ್ರಷ್ಟಾಚಾರದ ವಿರುದ್ದ ನಮ್ಮ ಸಮರ ಇಲ್ಲಿಗೆ ನಿಲ್ಲಲ್ಲ. ಸುಪ್ರೀಂಕೋರ್ಟ್ ನಲ್ಲಿ ಕಾನೂನು ಹೋರಾಟ ಮುಂದುವರೆಸುತ್ತೇವೆ ಎಂದಿದ್ದಾರೆ.
ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ನಡೆಸಲು ನೀಡಿದ್ದ ಸಮ್ಮತಿ ಹಿಂಪಡೆದಿದ್ದ ಕ್ರಮವನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ನಾವು ಹಾಕಿದ್ದ ದಾವೆಯನ್ನು ಘನ ನ್ಯಾಯಾಲಯವು ಇದರಲ್ಲಿ ಸಾಂವಿಧಾನಿಕ ಪ್ರಶ್ನೆಗಳು ಉದ್ಭವಿಸುವ ಕಾರಣ ನಮ್ಮ ಅರ್ಜಿಯನ್ನು ಹಿರಿಯ ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ಪೀಠವು ತಿರಸ್ಕರಿಸಿದೆ.
ಘನ ನ್ಯಾಯಾಲಯದ ತೀರ್ಪನ್ನು ಗೌರವಿಸುತ್ತಾ, ಸರ್ವೋಚ್ಚ ನ್ಯಾಯಾಲಯದಲ್ಲಿ ನಾವು ಇದನ್ನು ಪ್ರಶ್ನಿಸುತ್ತೇವೆ. ಭ್ರಷ್ಟಾಚಾರದ ವಿರುದ್ಧ ನಮ್ಮ ಸಮರ ಇಲ್ಲಿಗೆ ನಿಲ್ಲುವುದಿಲ್ಲ. ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ನಾವು ಕೊಂಡೊಯ್ಯುತ್ತೇವೆ ಎಂದು ಟ್ವೀಟ್ ಯತ್ನಾಳ್ ಟ್ವೀಟ್ ಮಾಡಿದ್ದಾರೆ.
Key words: fight, against, corruption, MLA, Basanagowda Patil Yatnal