ಸೆ.9ರವರೆಗೂ ಸಿಎಂ ಸಿದ್ದರಾಮಯ್ಯಗೆ ರಿಲೀಫ್: ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು,ಸೆಪ್ಟಂಬರ್,2,2024 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ  ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಸೆಪ್ಟಂಬರ್ 9ಕ್ಕೆ ಮುಂದೂಡಿಕೆ ಮಾಡಿದೆ.

ಇಂದು ಹೈಕೋರ್ಟ್ ನ ನ್ಯಾ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ದೂರುದಾರ ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಕೆ.ಜಿ ರಾಘವನ್ ವಾದ ಮಂಡಿಸಿದರು.  ಬಳಿಕ ನ್ಯಾಯಪೀಠ ಅರ್ಜಿ ವಿಚಾರಣೆಯನ್ನ ಸೆಪ್ಟಂಬರ್ 9ಕ್ಕೆ ಮುಂದೂಡಿದೆ. ಹಾಗೆಯೇ ನ್ಯಾಯಾಧೀಶರು ಮಧ್ಯಂತರ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.

ಸೆಪ್ಟಂಬರ್ 9ರಂದು ಎಜಿ ಶಶಿಕಿರಣ್  ಶೆಟ್ಟಿ ವಾದ ಮಂಡನೆ  ಮಾಡಲಿದ್ದಾರೆ. ಸೆಪ್ಟಂಬರ್ 12ಕ್ಕೆ ಸಿಎಂ ಪರ ಅಭಿಷೇಕ್ ಮನು ಸಿಂಘ್ವಿ ವಾದ ಮಂಡನೆ ಮಾಡಲಿದ್ದಾರೆ. ಈ ನಡುವೆ ಸೆಪ್ಟಂಬರ್ 12ಕ್ಕೆ ವಿಚಾರಣೆ ಮುಗಿಸೋಣ ಎಂದು ನ್ಯಾಯಪೀಠ ತಿಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: CM Siddaramaiah, September 9, High Court,  adjourned, hearing