ಎತ್ತಿನಹೊಳೆ ಯೋಜನೆ ಮೊದಲ ಹಂತ ಲೋಕಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ

ಹಾಸನ, ಸೆಪ್ಟಂಬರ್,6,2024 (www.justkannada.in): ರಾಜ್ಯದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು.

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ದೊಡ್ಡನಾಗರದ ಬಳಿ ವಿತರಣಾ ತೊಟ್ಟಿ 3ರಲ್ಲಿ ಟೇಪ್ ಕತ್ತರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಎತ್ತಿನಹೊಳೆ ಯೋಜನೆ ಮೊದಲ ಹಂತವನ್ನ ಲೋಕಾರ್ಪಣೆ ಮಾಡಿದ್ದಾರೆ.

ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಡಾ ಜಿ.ಪರಮೇಶ್ವರ್, ಎಂ.ಬಿ ಪಾಟೀಲ್, ಕೆ.ಎನ್ ರಾಜಣ್ಣ ಮತ್ತಿತರರು ಉಪಸ್ಥಿತರಿದ್ದರು.

ಇದು ಬರೊಬ್ಬರಿ 23 ಸಾವಿರ ಕೋಟಿ ವೆಚ್ಚದ ಯೋಜನೆಯಾಗಿದ್ದು ಹಾಸನ ಜಿಲ್ಲೆಯ ಸಕಲೇಶಫುರ ತಾಲ್ಲೂಕಿನ ವ್ಯಾಪ್ತಿಯ ಪಶ್ಚಿಮಘಟ್ಟದಲ್ಲಿ ಹುಟ್ಟಿ ಹರಿಯುವ ಎತ್ತಿನಹೊಳೆ ಹಾಗೂ ಸುತ್ತಮುತ್ತಲ ಹಳ್ಳಗಳಿಂದ ನೀರನ್ನು ಮೆಲೆತ್ತಿ ಬೆಂಗಳೂರು ಗ್ರಾಮಾಂತರ ಸೇರಿದಂತೆ ಬಯಲು ಸೀಮೆಯ 7 ಜಿಲ್ಲೆಗಳಿಗೆ ಪೂರೈಸುವುದಕ್ಕೆ ಸಂಬಂಧಿಸಿದ ಯೋಜನೆ ಇದಾಗಿದೆ.

Key words: CM Siddaramaiah, launched, first phase, Ettinahole project