ಚಾಮುಂಡೇಶ್ವರಿ ಪ್ರಾಧಿಕಾರ ವಿಚಾರ: ಹಾಲಿ ಸಂಸದರಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಪರೋಕ್ಷ ಟಾಂಗ್

ಮೈಸೂರು,ಸೆಪ್ಟಂಬರ್,11,2024 (www.justkannada.in):  ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಹಾಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಹೆಸರು ಹೇಳದೆ ಮಾಜಿ ಸಂಸದ ಪ್ರತಾಪ್ ಸಿಂಹ ಪರೋಕ್ಷ ಟಾಂಗ್ ಕೊಟ್ಟಿದ್ದಾರೆ.

ಚಾಮುಂಡಿ ಬೆಟ್ಟದ ಪ್ರಾಧಿಕಾರ ಸ್ಥಾಪನೆಗೆ ರಾಜಮನೆತನ ವಿರೋಧ ವಿಚಾರ ಕುರಿತು ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ, ಸಿದ್ದರಾಮಯ್ಯರನ್ನು ಕೆಲವು ಸೈದ‍್ಧಾಂತಿಕ ವಿಚಾರದಲ್ಲಿ ಮಾತ್ರ ವಿರೋಧಿಸುತ್ತೇನೆ. ಬೆಟ್ಟದ ಯದ್ವಾತದ್ವಾ ಬೆಳವಣಿಗೆ ನಿಯಂತ್ರಿಸಲು ನ್ಯೂನತೆಗಳನ್ನು ಸರಿದೂಗಿಸಲು ಪ್ರಾಧಿಕಾರ ಅವಶ್ಯಕತೆ ಇದೆ. ಬೆಟ್ಟಕ್ಕೆ ಪೋಲಿಸ್ ಠಾಣೆ ಹಾಗೂ ಆಸ್ಪತ್ರೆ ಬೇಕು. ಇದೆಲ್ಲಾ ಆಗಲು ಒಂದು ಪ್ರಾಧಿಕಾರ ಬೇಕೇ ಬೇಕು. ಈ ಹಿಂದೆ ಬಿಜೆಪಿ ಸರ್ಕಾರದಲ್ಲೂ  ಪ್ರಾಧಿಕಾರ ಬೇಕೆಂದು ಧ್ವನಿ ಎತ್ತಿದ್ದೆವು. ಸಿದ್ದರಾಮಯ್ಯನವರು ಪ್ರಾಧಿಕಾರ ರಚನೆ ಮಾಡಿದ್ದಾರೆ. ಖಂಡಿತ ಇದು ಒಳ್ಳೆಯ ಕೆಲಸ. ಆಸ್ತಿ ಒಡೆದಾಟದ ಬಗ್ಗೆ ಮಾತನಾಡಲ್ಲಆದರೆ ದೇವರು ಭಕ್ತರಿಗೆ ಸೇರಬೇಕು. ಭಕ್ತರಿಗೆ ಸೌಲಭ್ಯ ಕಲ್ಪಿಸಬೇಕಾಗಿದ್ದು ಸರ್ಕಾರದ ಕರ್ತವ್ಯ ಎಂದರು.

ಅಮೃತ್ ಯೋಜನೆ ಕುಡಿಯುವ ನೀರು ಚಾಮುಂಡಿ ಬೆಟ್ಟಕ್ಕೆ ತಲುಪದಿರಲು ಕಾರಣ ಯಾರು.? ನಾನು ಹೇಳಿದ್ರೆ ಕಾಂಟ್ರವರ್ಸಿ ಆಗುತ್ತೆ. ಪೈಪ್‌ ಲೈನ್ ಎಲ್ಲಿ ತಡೆದು ನಿಂತಿದೆ ನೀವೆ ಹೋಗಿ ಹುಡುಕಿ ಎನ್ನುವ ಮೂಲಕ ಪರೋಕ್ಷವಾಗಿ ಹೆಸರು ಹೇಳದೆ ಸಂಸದ ಯದುವೀರ್ ಒಡೆಯರ್  ಅವರಿಗೆ ಪ್ರತಾಪ್ ಸಿಂಹ ಟಾಂಗ್ ಕೊಟ್ಟರು

ಚಾಮುಂಡಿ ಬೆಟ್ಟದ ದೇವಿಕೆರೆ ಮೇಲೆ  ನಮಾಜ್ ಮಾಡುತ್ತಿದ್ದರು. ಚಾಮುಂಡಿ ಬೆಟ್ಟದಲ್ಲಿ 12 ಮುಸ್ಲಿಂ ಷಾಪ್ ಇತ್ತು. ಹಿಂದೂಗಳ ದೇವಸ್ಥಾನ, ಭಕ್ತಿ ಭಾವದಿಂದ ಹೋಗುವ  ಜಾಗದಲ್ಲಿ ಇವರು ಯಾಕೆ ಅಂಗಡಿ ಇಡಬೇಕು. ಮುಜರಾಯಿ ಕಾನೂನಿನಲ್ಲಿ ಕೂಡ ಇದಕ್ಕೆ ಅವಕಾಶ ಇಲ್ಲ ಎಂದು ಮುಸ್ಲಿಂ ಅಂಗಡಿಗಳನ್ನು  ತೆಗೆಸಿದ್ದೆ. ಚಾಮುಂಡೇಶ್ವರಿಗೆ ಅವಮಾನ‌ದ ರೀತಿಯಲ್ಲಿದ್ದ ಮಹಿಷ ದಸರಾ ತಡೆಯೊ ಕೆಲಸ ಮಾಡಿದೆ. ಅವತ್ತು ಚಾಮುಂಡೇಶ್ವರಿ ತಾಯಿಗೆ ಅನ್ಯಾಯ ಆಗುವಾಗ  ಮಾತನಾಡಿಲ್ಲ. ಇಂದು ಬೇರೆ ಬೇರೆ ಕಾರಣಕ್ಕೆ ಕಾಂಟ್ರವರ್ಸಿ ಮಾಡ್ತಾರೆ ಎಂದು ಹೇಳುವ ಮೂಲಕ  ಈ ಹಿಂದೆ ಸಂಸದರಾಗಿದ್ದ ಸಂಧರ್ಭದಲ್ಲಿ ತಮ್ಮ ಹೋರಟವನ್ನ ನೆನಪಿಸಿಕೊಂಡರು.

Key words: mysore, Chamundeshwari development Authority, Pratap Simha