ಶ್ರೀನಗರ,ಸೆಪ್ಟಂಬರ್,18,2024 (www.justkannada.in): ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದಿನಿಂದ ವಿಧಾನಸಭೆ ಚುನಾವಣೆಯ ಮತದಾನ ಆರಂಭವಾಗಿದ್ದು ಮೊದಲ ಹಂತದಲ್ಲಿ ಏಳು ಜಿಲ್ಲೆಗಳ 24 ಕ್ಷೇತ್ರಗಳಲ್ಲಿ ವೋಟಿಂಗ್ ನಡೆಯುತ್ತಿದೆ.
ಜಮ್ಮು ಕಾಶ್ಮೀರ ವಿಧಾನಸಭೆಗೆ ಮೂರು ಹಂತದಲ್ಲಿ ಚುನಾವಣೆ ನಡೆಯಲಿದ್ದು ಇಂದು ಮೊದಲ ಹಂತದ ಮತದಾನ ನಡೆಯುತ್ತಿದೆ. ಜನರು ಉತ್ಸಾಹದಿಂದ ಬಂದು ಮತಚಲಾಯಿಸುತ್ತಿದ್ದು, ಬೆಳಿಗ್ಗೆ 9 ಗಂಟೆ ವೇಳೆಗೆ ಶೇ 11.11ರಷ್ಟು ಮತದಾನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಜಮ್ಮುಕಾಶ್ಮೀರದಲ್ಲಿ 5.66 ಲಕ್ಷ ಯುವಕರು ಸೇರಿದಂತೆ ಸುಮಾರು 23.27 ಲಕ್ಷ ಮತದಾರರು 219 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಪ್ರಮುಖ ಅಭ್ಯರ್ಥಿಗಳಲ್ಲಿ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರ ಪುತ್ರಿ ಇಲ್ತಿಜಾ ಮುಫ್ತಿ, ಶ್ರೀಗುಫ್ವಾರಾ-ಬಿಜ್‌ಬೆಹರಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಎರಡು ಬಾರಿ ಸಚಿವರಾಗಿದ್ದ ಗುಲಾಮ್ ಅಹ್ಮದ್ ಮಿರ್ (ದೂರು), ನಾಲ್ಕು ಬಾರಿ ಶಾಸಕ ಮತ್ತು ಹಿರಿಯ ಸಿಪಿಐಎಂ ನಾಯಕ ಎಂ ವೈ ತಾರಿಗಾಮಿ (ಕುಲ್ಗಾಮ್), ಕಾಂಗ್ರೆಸ್‌ನ ಮಾಜಿ ಸಚಿವರಾದ ಪಿರ್ಜಾದಾ ಸಯೀದ್ (ಅನಂತನಾಗ್)ನಲ್ಲಿ ಸ್ಪರ್ಧಿಸಿದ್ದಾರೆ.
Key words: Jammu and Kashmir, Assembly Election, 11.11 percent, voting