ಬೈಕ್ ಗೆ ಕಾರು ಡಿಕ್ಕಿಯಾಗಿ 5 ವರ್ಷದ ಮಗು ಸಾವು: ದಂಪತಿಗೆ ಗಂಭೀರ ಗಾಯ

ಮೈಸೂರು,ಸೆಪ್ಟಂಬರ್,23,2024 (www.justkannada.in): ಹಿಂಬದಿಯಿಂದ ಬೈಕ್ ಗೆ ಕಾರು ಡಿಕ್ಕಿಯಾಗಿ 5 ವರ್ಷದ ಮಗು ಸಾವನ್ನಪ್ಪಿ ದಂಪತಿ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಇಲವಾಲದ ಪೆಟ್ರೋಲ್ ಬಂಕ್ ಬಳಿ ಈ ಅಪಘಾತ ಸಂಭವಿಸಿದೆ. ಲಿಖಿತ್ ಮೃತ ಬಾಲಕ. ರಸ್ತೆಯಲ್ಲಿ ಬೈಕ್ ನಲ್ಲಿ ಹೋಗುತ್ತಿದ್ದ ದಂಪತಿಗೆ ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ ನಲ್ಲಿದ್ದ ತಾಯಿ ಮಗು ಇಬ್ಬರು ಹಾರಿ ಬಿದ್ದಿದ್ದಾರೆ.

ಈ ವೇಳೆ ರಸ್ತೆಗೆ ಬಿದ್ದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.   ಮಗುವಿನ ತಂದೆ-ತಾಯಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ.

Key words:  child, dies, car, collides, bike, mysore