ಹಿಂದೂ ದೇವಾಲಯ, ಧಾರ್ಮಿಕ ಕೇಂದ್ರಗಳನ್ನ ಸರ್ಕಾರದಿಂದ ಮುಕ್ತಗೊಳಿಸಿ : ವಿಶ್ವ ಹಿಂದೂ ಪರಿಷತ್ ಮನವಿ

ಮೈಸೂರು,ಸೆಪ್ಟಂಬರ್,26,2024 (www.justkannada.in): ಹಿಂದೂ ದೇವಾಲಯ, ಧಾರ್ಮಿಕ ಕೇಂದ್ರಗಳನ್ನ ಸರ್ಕಾರದಿಂದ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಪ್ರತಿಭಟನೆ ನಡೆಸಿ ಮೈಸೂರು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿತು.

ನಗರದ ಸಿದ್ದಾರ್ಥ ಲೇಔಟ್ ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ  ವಿಶ್ವ ಹಿಂದೂ ಪರಿಷತ್  ಜಿಲ್ಲಾಧ್ಯಕ್ಷ ಮಹೇಶ್ ಕಾಮತ್ ನೇತೃತ್ವದಲ್ಲಿ ಭೇಟಿ ನೀಡಿ ಜಿಲ್ಲಾಡಳಿತ ಕಚೇರಿಯ ತಹಶೀಲ್ದಾರ್ ಶಿವಪ್ರಸಾದ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಹಿಂದೂ ದೇವಾಲಯ ಮತ್ತು ಧಾರ್ಮಿಕ ಕೇಂದ್ರಗಳನ್ನು ಸರ್ಕಾರದಿಂದ ಮುಕ್ತಗೊಳಿಸುವಂತೆ ಮನವಿ ಮಾಡಿದರು.

ಈ ವೇಳೆ ವಿಶ್ವ ಹಿಂದೂ ಪರಿಷತ್ ಉಪಾಧ್ಯಕ್ಷ ಜಗದೀಶ್ ಹೆಬ್ಬಾರ್, ಅಂಬಿಕಾ ಜೀವನ್, ಸಹ ಕಾರ್ಯದರ್ಶಿ ಪುನೀತ್ ಜಿ ಕೂಡ್ಲೂರು, ಜಯಶ್ರೀ ಶಿವರಾಂ, ಗೋರಕ್ಷಾ ಪ್ರಮುಖ್ ಶಿವರಾಜ್, ಸೇವಾ ಪ್ರಮುಖ್ ಲೋಕೇಶ್, ಸವಿತಾ ಘಾಟ್ಕೆ ಸೇರಿದಂತೆ ಹಲವಾರು ಹಿಂದೂ ಕಾರ್ಯಕರ್ತರು ಉಪಸ್ಥಿತರಿದ್ದರು.

Key words: Hindu temples, religious centers, government, VHP, mysore