ಮೈಸೂರು,ಸೆಪ್ಟಂಬರ್, 27,2024 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶದಂತೆ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ಎಫ್ ಐಆರ್ ದಾಖಲಾಗಿದೆ.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಕೇಸ್ ನಂಬರ್ 11/2024 ಅಡಿ ಲೋಕಾಯುಕ್ತ ಎಸ್ಪಿ ಉದೇಶ್ ರಿಂದ ಎಫ್ಐಆರ್ ದಾಖಲು ಮಾಡಲಾಗಿದೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ A1, ಸಿಎಂ ಪತ್ನಿ ಬಿ.ಎನ್ ಪಾರ್ವತಿ A2, ಸಿಎಂ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ್ ಸ್ವಾಮಿ A3 ಹಾಗೂ ಭೂಮಿ ಮಾರಾಟ ಮಾಡಿದ ದೇವರಾಜು A4 ಎಂದು ಎಫ್ ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.
ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಶುರುವಾಗಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸ್ನೇಹಮಯಿ ಕೃಷ್ಣ ಖಾಸಗಿ ದೂರು ದಾಖಲಿಸಿದ್ದರು. ಈ ನಡುವೆ ಪ್ರಕರಣ ಸಂಬಂಧ 3 ತಿಂಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ.
Key words: Muda scam, FIR, filed, against, CM Siddaramaiah