ಮೈಸೂರು,ಸೆಪ್ಟಂಬರ್,27,2024 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ ಐಆರ್ ದಾಖಲಾಗಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ದೂರುದಾರ ಸ್ನೇಹಮಯಿ ಕೃಷ್ಣ, ತಾರ್ಕಿಕ ಅಂತ್ಯ ಕಾಣಿಸುವವರೆಗೂ ಹೋರಾಟ ನಿಲ್ಲಿಸಲ್ಲ ಎಂದಿದ್ದಾರೆ.
ಈ ಕುರಿತು ಮಾತನಾಡಿದ ಸ್ನೇಹಮಯಿ ಕೃಷ್ಣ, ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಘಟನೆ. ಸಿಎಂ ವಿರುದ್ದ ಒಬ್ಬ ಸಾಮಾನ್ಯ ವ್ಯಕ್ತಿಯಾಗಿ ಹೋರಾಡಿದ್ದಾನೆ. ನನ್ನ ಹಿಂದೆ ಹಲವು ಸಾಮಾಜಿಕ ಹೋರಾಟಗಾರರಿದ್ದಾರೆ. ಪ್ರಕರಣವನ್ನ ತಾರ್ಕಿಕ ಅಂತ್ಯ ಕಾಣಿಸುವವರೆಗೂ ಹೋರಾಟ ನಿಲ್ಲಿಸಲ್ಲ ಎಂದರು.
ಎಫ್ ಐಆರ್ ನಲ್ಲಿ ಸಿಎಂ ಸಿದ್ದರಾಮಯ್ಯ ಎ1 ಎಂದು ಉಲ್ಲೇಖಿಸಲಾಗಿದೆ. ಪ್ರಕರಣ ತನಿಖೆಗೆ ಸಿಬಿಐಗೆ ವಹಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದೇವೆ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದರು.
ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ಕಚೇರಿಗೆ ತೆರಳಿ ಎಫ್ ಐಆರ್ ಪ್ರತಿಯನ್ನು ಪಡೆದಿದ್ದಾರೆ.
Key words: Muda case, Struggle, logical end, Snehamai Krishna