ಹಸುವನ್ನು ‘ರಾಜ್ಯಮಾತೆ’ ಎಂದು ಘೋಷಿಸಿದ ಮಹಾರಾಷ್ಟ್ರ ಸರ್ಕಾರ

ಮುಂಬೈ,ಸೆಪ್ಟಂಬರ್,30,2024 (www.justkannada.in):   ಮಹಾರಾಷ್ಟ್ರ ಸರ್ಕಾರ ಹಸುವನ್ನು ‘ರಾಜ್ಯ ಮಾತೆ’ ಎಂದು ಅಧಿಕೃತವಾಗಿ ಘೋಷಣೆ ಮಾಡಿದೆ.

ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ಈ ಘೋಷಣೆ ಮಾಡಿದ್ದು,  ಹಸು ಭಾರತೀಯ ಸಂಪ್ರದಾಯದ ಪ್ರಮುಖ ಭಾಗವಾಗಿದೆ ಮತ್ತು ಅನಾದಿ ಕಾಲದಿಂದಲೂ ಆಧ್ಯಾತ್ಮಿಕ, ವೈಜ್ಞಾನಿಕ ಮಹತ್ವವನ್ನು ಹೊಂದಿದೆ ಎಂದು ಹೇಳಿದೆ. ಭಾ ರತೀಯ ಸಂಪ್ರದಾಯದಲ್ಲಿ ಗೋವುಗಳ ಸಾಂಸ್ಕೃತಿಕ ಪ್ರಾಮುಖ್ಯತೆಯನ್ನು ಉಲ್ಲೇಖಿಸಿ ಸರ್ಕಾರ ಈ ಕ್ರಮ ಕೈಗೊಂಡಿದೆ.

ಭಾರತದಲ್ಲಿ ಗೋವಿಗೆ ತಾಯಿಯ ಸ್ಥಾನಮಾನವನ್ನು ನೀಡಲಾಗಿದ್ದು, ಹಿಂದೂ ಧರ್ಮದಲ್ಲಿ ಗೋವನ್ನು ಪೂಜಿಸಲಾಗುತ್ತದೆ. ಇದಲ್ಲದೆ, ಹಸುವಿನ ಹಾಲು, ಮೂತ್ರ ಮತ್ತು ಸಗಣಿಗಳನ್ನು ಪವಿತ್ರವೆಂದು ಪರಿಗಣಿಸಲಾಗಿದೆ. ಇದೀಗ ಗೋವುಗಳನ್ನು ಮಹಾರಾಷ್ಟ್ರ ಸರ್ಕಾರ ರಾಜ್ಯಮಾತೆ ಎಂದು ಘೋಷಣೆ ಮಾಡಿದೆ.

Key words: Maharashtra government, cow, mother of the state