ಮುಡಾ ಹಗರಣ ಆರೋಪ ಕಾಂಗ್ರೆಸ್ ಗೆ  ಹರಿಯಾಣ ಚುನಾವಣೆಯಲ್ಲಿ ಎಫೆಕ್ಟ್-ಕೆಬಿ ಕೋಳಿವಾಡ

ಬೆಂಗಳೂರು, ಅಕ್ಟೋಬರ್​ ,8,2024 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಮುಡಾ ಹಗರಣವು ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎಫೆಕ್ಟ್ ನೀಡಿದೆ ಎಂದು ಮಾಜಿ ಸ್ಪೀಕರ್ ಕೆ.ಬಿ ಕೋಳಿವಾಡ ಹೇಳಿದ್ದಾರೆ.

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿ ಅಧಿಕಾರ ಹಿಡಿಯಲು ಮುಂದಾಗಿದ್ದು ಕಾಂಗ್ರೆಸ್ ಗೆ ಸೋಲಾಗಿದೆ. ಈ ಕುರಿತು ಮಾತನಾಡಿರುವ ಕಾಂಗ್ರೆಸ್ ಹಿರಿಯ ನಾಯಕ ಕೆ.ಬಿ ಕೋಳಿವಾಡ, ಮುಡಾ ಹಗರಣವು ಹರಿಯಾಣ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಪರಿಣಾಮ ಬೀರಿದೆ.  ಚುನಾವಣೆ ಪ್ರಚಾರದಲ್ಲಿ ಪ್ರಧಾನಿ ಮೋದಿ ಅವರು ಮುಡಾ ಹಗರಣದ ಬಗ್ಗೆ ಪದೇಪದೆ ಮಾತನಾಡಿದ್ದೂ ಕೂಡ ಸಾಕಷ್ಟು ಎಫೆಕ್ಟ್ ಆಗಿದೆ ಎಂದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು ಎಂಬ ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ಮುಖ್ಯಮಂತ್ರಿಗಳು ರಾಜೀನಾಮೆ ಕೊಡಲಿ ಎಂಬ ನನ್ನ ಹೇಳಿಕೆ ಅಳಿಸಲು ಸಾಧ್ಯವಿಲ್ಲ. ನಾನು ಕಾಂಗ್ರೆಸ್ ಪಕ್ಷದ ದೃಷ್ಟಿಯಿಂದ ಆ ಮಾತನ್ನು ಹೇಳಿದ್ದೇನೆ. ಕಾಂಗ್ರೆಸ್ ಪಕ್ಷಕ್ಕೆ ಧಕ್ಕೆ ಆದರೆ ನೋಟಿಸ್ ಕೊಡುತ್ತಾರೆ. ನಾನು ಸಕ್ರಿಯ ರಾಜಕಾರಣದಲ್ಲಿ ಇಲ್ಲ, ಪಕ್ಷ ಉಳಿಸಲು ಕೆಲಸ ಮಾಡುತ್ತೇನೆ ಎಂದು ಕೆಬಿ ಕೋಳಿವಾಡ ತಿಳಿಸಿದರು.

Key words: Muda scam, Congress, effect, Haryana elections, KB Koliwada