ಬೆಂಗಳೂರು, ಅಕ್ಟೋಬರ್ , 9,2024 (www.justkannada.in): ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿರುವ ಆರೋಪದ ಮೇಲೆ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ವಿರುದ್ಧ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಶಾಸಕ ವಿನಯ್ ಕುಲಕರ್ಣಿ ವಿರುದ್ದ ಸಂತ್ರಸ್ತ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಎಫ್ ಐಆರ್ ದಾಖಲಾಗಿದೆ. ವಿನಯ್ ಕುಲಕರ್ಣಿ ಅವರ ಆಪ್ತ ಸಹಾಯಕ ಅರ್ಜುನ್ ವಿರುದ್ಧವೂ ಬೆದರಿಕೆ ಹಾಕಿದ ಆರೋಪದಡಿ ಪ್ರಕರಣ ದಾಖಲಾಗಿದೆ.
ದೂರಿನಲ್ಲೇನಿದೆ.
2022ರಲ್ಲಿ ನಾನು ಶಾಸಕರನ್ನು ಭೇಟಿ ಮಾಡಿದ್ದೆ. ಬಳಿಕ ರೈತರೊಬ್ಬರಿಂದ ನನ್ನ ಫೋನ್ ನಂಬರ್ ಪಡೆದಿದ್ದ ಶಾಸಕರು, ರಾತ್ರಿ ವೇಳೆಯೂ ನನಗೆ ಕರೆ ಮಾಡಲು ಪ್ರಾರಂಭಿಸಿದ್ದರು. ಬೆತ್ತಲೆಯಾಗಿದ್ದಾಗ ವೀಡಿಯೊ ಕರೆ ಮಾಡುವಂತೆ, ಹೆಬ್ಬಾಳದಲ್ಲಿರುವ ತಮ್ಮ ಮನೆಗೆ ಬರುವಂತೆ ಒತ್ತಾಯಿಸಿದ್ದರು. ಇದಕ್ಕೆ ನಿರಾಕರಿಸಿದಾಗ ಶಾಸಕರ ಮನೆಗೆ ಹೋಗದಿದ್ದಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ರೌಡಿಗಳ ತಂಡವೊಂದು ಬೆದರಿಕೆ ಹಾಕಿತು ಎಂದು ಆರೋಪಿಸಿದ್ದಾರೆ.
ಏಪ್ರಿಲ್‌ನಲ್ಲಿ, ಶಾಸಕರು ನನ್ನನ್ನು ಬೆಳಗಾವಿಗೆ ಕರೆದರು, ಅಲ್ಲಿ ನನಗೆ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ್ದು ಆಗ ನಾನು ತಪ್ಪಿಸಿಕೊಂಡಿದ್ದೆ. ಆಗಸ್ಟ್ 24 ರಂದು ಕೆಲಸದ ನಿಮಿತ್ತ ಬೆಂಗಳೂರಿಗೆ ಬಂದಿದ್ದೆ. ಆಗ ಕರೆ ಮಾಡಿ ಹೆಬ್ಬಾಳದ ಮನೆಗೆ ಬರುವಂತೆ ಸೂಚಿಸಿದ್ದರು. ಕಾರಿನಲ್ಲಿ ಒಬ್ಬರೇ ಬಂದು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ.
ಶಾಸಕ ವಿನಯ್ ಕುಲಕರ್ಣಿ ಅವರಿಂದ ಪ್ರತಿದೂರು
ಇನ್ನು ಶಾಸಕ ವಿನಯ್ ಕುಲಕರ್ಣಿ ಅವರೂ ಸಹ ಸಂತ್ರಸ್ತ ಮಹಿಳೆ ವಿರುದ್ದ ಪ್ರತಿದೂರು ದಾಖಲಿಸಿದ್ದಾರೆ. ತನ್ನ ವಿಡಿಯೋ ಹಾಗೂ ಮೊಬೈಲ್ ಸಂಭಾಷಣೆ ಪ್ರಸಾರ ಮಾಡಲು ಷಡ್ಯಂತ್ರ ರೂಪಿಸಿದ್ದಾರೆ. ಸಂತ್ರಸ್ತೆ ಅನೇಕ ಅಧಿಕಾರಿಗಳು ಹಾಗೂ ರಾಜಕೀಯ ನಾಯಕರಿಗೆ ಬ್ಲಾಕ್ ಮೇಲ್ ಮಾಡಿದ್ದಾಳೆ. ಸಂತ್ರಸ್ತೆ ಮೂಲಕ ನನ್ನ ವಿರುದ್ಧ ಸಂಚು ರೂಪಿಸಿ ಮಾನಹಾನಿ ಮಾಡಲಾಗಿದೆ ಎಂದು ಶಾಸಕ ವಿನಯ ಕುಲಕರ್ಣಿ ದೂರಿನಲ್ಲಿ ದಾಖಲಿಸಿದ್ದಾರೆ.
Key words: Rape allegation, FIR, against, MLA, Vinay Kulkarni