ಬೆಂಗಳೂರು, ಅಕ್ಟೋಬರ್ 11,2024 (www.justkannada.in): ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಅಂದು ಎಲ್ಲ ಶಾಲಾ, ಕಾಲೇಜುಗಳು, ಕಾರ್ಖಾನೆಗಳು ಮತ್ತು ಐಟಿಬಿಟಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಸೂಚಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, 50ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದ್ದೇವೆ. ನವೆಂಬರ್ 1ರಂದು ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸಬೇಕು. ಬೆಂಗಳೂರು ಜಿಲ್ಲೆಯಲ್ಲಿ ಶೇ 50 ರಷ್ಟು ಜನ ಹೊರಗಿನಿಂದ ಬಂದವರಿದ್ದಾರೆ. ಹೊರಗಿನಿಂದ ಬಂದವರು ಸಹ ಕನ್ನಡ ಕಲಿಯಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ಮಾಡಬೇಕು. ರಾಷ್ಟ್ರಧ್ವಜದ ರೀತಿ ಕನ್ನಡ ಬಾವುಟಕ್ಕೆ ಗೌರವ ಕೊಡಬೇಕು ಎಂದರು.
ಕೋವಿಡ್ ಹಗರಣ ಕುರಿತು ತನಿಖೆಗೆ ಎಸ್ ಐಟಿ ರಚನೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ನನ್ನ ನೇತೃತ್ವದಲ್ಲಿ ಸಬ್ ಕಮಿಟಿ ಮಾಡಲಾಗಿದೆ. ಹಬ್ಬದ ಬಳಿಕ ಈ ಬಗ್ಗೆ ಮಾತನಾಡುತ್ತೇನೆ ಎಂದರು.
Key words: Kannada flag, hoisted, TBT offices, November 1, DCM DK Shivakumar